ಮೀರ್ ಸಾದಿಕ್‌ ಕರ್ನಾಟಕ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದ್ರೋಹ ಬಗೆಯುವುದರಲ್ಲಿ ಮಲ್ಲಪ್ಪ ಶೆಟ್ಟಿ, ಮೀರ್ ಸಾದಿಕ್‌ರನ್ನು ಮೀರಿಸುತ್ತಿದೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಕಳೆದ ವರ್ಷ ಭೀಕರ ಬರಗಾಲದ ನಡುವೆಯೂ ಕದ್ದು ಮುಚ್ಚಿ ಕಾವೇರಿಯನ್ನು ತಮಿಳುನಾಡಿಗೆ ಹರಿಸುವ ಕಳ್ಳಾಟ ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ಬಿರು ಬೇಸಿಗೆಯನ್ನೂ ಲೆಕ್ಕಿಸದೆ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ 1.24 ಟಿಎಂಸಿ ನೀರನ್ನು ತೆಲಂಗಾಣ ರಾಜ್ಯಕ್ಕೆ ಹರಿಸುತ್ತಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ಈಗ ನೀರು ಬಿಟ್ಟರೆ ರಾಜ್ಯಕ್ಕೆ ತೊಂದರೆ ಆಗುತ್ತದೆ ಎಂದು ಅಧಿಕಾರಿಗಳು ಅಭಿಪ್ರಾಯ ಪಟ್ಟಮೇಲೂ, ರೈತ ಪರ ಸಂಘಟನೆಗಳ ವಿರೋಧದ ನಡುವೆಯೂ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ತೆಲಂಗಾಣಕ್ಕೆ ನೀರು ಹರಿಸುತ್ತಿದ್ದೀರಲ್ಲಾ, ಮುಖ್ಯಮಂತ್ರಿ ಕುರ್ಚಿಗಾಗಿ   ಕಾಂಗ್ರೆಸ್ ಹೈಕಮಾಂಡ್ ಬಳಿ ನಿಮ್ಮ ಪರ ಲಾಭಿ ಮಾಡಲು ತೆಲಂಗಾಣ ಕಾಂಗ್ರೆಸ್ ನಾಯಕರೊಂದಿಗೆ ಏನಾದರೂ ಒಳ ಒಪ್ಪಂದ ಮಾಡಿಕೊಂಡಿದ್ದೀರಾ? ನಾಡಿನ ರೈತರು, ಜನಸಾಮಾನ್ಯರ ಹಿತರಕ್ಷಣೆಗಿಂತ ತಮ್ಮ ರಾಜಕೀಯ ಸ್ವಾರ್ಥವೇ ಹೆಚ್ಚಾಯ್ತಾ? ಇಷ್ಟಕ್ಕೂ ಯಾರನ್ನ ಕೇಳಿ ಕರ್ನಾಟಕದ ನೀರನ್ನು ತೆಲಂಗಾಣಕ್ಕೆ ಹರಿಸಲು ಅನುಮತಿ ಕೊಟ್ಟಿರಿ? ಎಂದು ತೀಕ್ಷ್ಣವಾಗಿ ಅಶೋಕ್ ಪ್ರಶ್ನಿಸಿದ್ದಾರೆ.

 ಕನ್ನಡಿಗರಿಗೆ ನೀರು ಕೊಡದೆ, ಪರರಾಜ್ಯಗಳಿಗೆ ನೀರು ಕೊಡುತ್ತಿರುವ ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಸ್ವಾಭಿಮಾನಿ ಕನ್ನಡಿಗರೆಲ್ಲರೂ ತಕ್ಕ ಪಾಠ ಕಲಿಸಬೇಕು ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.

 

 

 

Share This Article
error: Content is protected !!
";