ಚಂದ್ರವಳ್ಳಿ ನ್ಯೂಸ್, ದೇವನಹಳ್ಳಿ:
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಅವರನ್ನು ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿಸಲಾಗಿದ್ದು ಆಗಸ್ಟ್ 28ರ ವರೆಗೆ ಜಾರಿ ನಿರ್ದೇಶನಾಲಯ (ಇ.ಡಿ) ಕಸ್ಟಡಿಗೆ ನೀಡಿ ಬೆಂಗಳೂರಿನ 35ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ.
ಕ್ಯಾಸಿನೋವನ್ನ ಗುತ್ತಿಗೆಗೆ ನೀಡುವ ಕುರಿತ ಮಾತುಕತೆಗಾಗಿ ಗ್ಯಾಂಗ್‌ಟಕ್‌ಗೆ ತೆರಳಿದ್ದ ವೀರೇಂದ್ರ ಅವರನ್ನು ಶನಿವಾರವಷ್ಟೇ ಇಡಿ ಅಧಿಕಾರಿಗಳು ಬಂಧಿಸಿದ್ದರು.
ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಟ್ರಾನ್ಸಿಟ್ ರಿಮಾಂಡ್ ಪಡೆದಿದ್ದ ಇ.ಡಿ ಅಧಿಕಾರಿಗಳು ತಡರಾತ್ರಿ ವೀರೇಂದ್ರ ಅವರನ್ನು ಬೆಂಗಳೂರಿಗೆ ಕರೆತಂದಿದ್ದರು.
ಬಳಿಕ 35ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರ ಕೋರಮಂಗಲದ ನಿವಾಸಕ್ಕೆ ಭಾನುವಾರ ವೀರೇಂದ್ರ ಅವರನ್ನು ಹಾಜರುಪಡಿಸಲಾಯಿತು.
ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆಯ 6, ಬೆಂಗಳೂರಿನ 10, ಗೋವಾದ 8, ಜೋಧ್‌ಪುರದ 3, ಮುಂಬೈನ 2, ಹುಬ್ಬಳ್ಳಿಯ 1 ಸೇರಿದಂತೆ 31 ಕಡೆಗಳಲ್ಲಿ ಕೆ.ಸಿ. ವೀರೇಂದ್ರಗೆ ಸಂಬಂಧಿಸಿದ ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಸುಮಾರು 1 ಕೋಟಿ ರೂ. ವಿದೇಶಿ ಕರೆನ್ಸಿ, 6 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು, 10 ಕೆ.ಜಿ ಬೆಳ್ಳಿಯ ವಸ್ತುಗಳು ಸೇರಿದಂತೆ 12 ಕೋಟಿ ರೂಪಾಯಿ ನಗದು ಹಾಗೂ 4 ವಾಹನಗಳನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆ 2002ರಡಿಯಲ್ಲಿ ವಶಪಡಿಸಿಕೊಳ್ಳಲಾಗಿತ್ತು.
ಇದಲ್ಲದೆ, 17 ಬ್ಯಾಂಕ್ ಖಾತೆಗಳು, 2 ಬ್ಯಾಂಕ್ ಲಾಕರ್‌ಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಮತ್ತು ವೀರೇಂದ್ರ ಅವರ ಸಹೋದರ ಕೆ.ಸಿ ನಾಗರಾಜ್, ಅವರ ಮಗ ಪೃಥ್ವಿ. ಎನ್ ರಾಜ್ ಅವರಿಂದ ಆಸ್ತಿಗೆ ಸಂಬಂಧಿಸಿದ ಅನೇಕ ದಾಖಲೆಗಳನ್ನು ಸಹ ವಶಪಡಿಸಿಕೊಳ್ಳಲಾಗಿತ್ತು.
ಅಕ್ರಮ ಆನ್ಲೈನ್, ಆಫ್ಲೈನ್ ಬೆಟ್ಟಿಂಗ್ ಸಂಬಂಧಿಸಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ (ಆ.23) ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ. ಸಿ. ವಿರೇಂದ್ರ (ಪಪ್ಪಿ) ಅವರನ್ನು ಸಿಕ್ಕಿಂನ ಗ್ಯಾಂಗ್ಟಕ್ನಲ್ಲಿ ಬಂಧಿಸಿದ್ದ ಇಡಿ ಅಧಿಕಾರಿಗಳು, ಅವರನ್ನು ಬೆಂಗಳೂರಿಗೆ ಕರೆತಂದಿದ್ದಾರೆ. ರಾತ್ರಿ 12 ಗಂಟೆ ಸುಮಾರಿಗೆ ದೇವನಹಳ್ಳಿ ಏರ್ಪೋರ್ಟ್ಗೆ ವಿರೇಂದ್ರ ಪಪ್ಪಿ ಜೊತೆ ಇಡಿ ಅಧಿಕಾರಿಗಳ ತಂಡ ಆಗಮಿಸಿತ್ತು.
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಕರೆತಂದ ಇಡಿ ಅಧಿಕಾರಿಗಳ ತಂಡ, ಮೊದಲಿಗೆ ವಿರೇಂದ್ರ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ಕಾನೂನು ಬಾಹಿರ ಬೆಟ್ಟಿಂಗ್ಗೆ ಸಂಬಂಧಿಸಿ ಹಣ ವರ್ಗಾವಣೆ ಆರೋಪದ ಮೇರೆಗೆ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಮತ್ತು ಅವರ ಸಹೋದರ ಹಾಗೂ ಇತರರಿಗೆ ಸಂಬಂಧಿಸಿದ ಹಲವು ಜಾಗಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದ್ದರು.
ಎರಡನೇ ದಿನ ಶನಿವಾರವೂ ಚಿತ್ರದುರ್ಗ ಜಿಲ್ಲೆಯ 6, ಬೆಂಗಳೂರಿನ 10, ಗೋವಾದ 8, ಜೋಧ್‌ಪುರದ 3, ಮುಂಬೈನ 2, ಸಿಕ್ಕಿಂನ ಗ್ಯಾಂಗ್‌ಟಕ್‌ನ 1 ಹಾಗೂ ಹುಬ್ಬಳ್ಳಿಯ 1 ಸೇರಿದಂತೆ 31 ಕಡೆಗಳಲ್ಲಿ ಶೋಧ ಕಾರ್ಯ ಮುಂದುವರೆಸಲಾಗಿತ್ತು. ಈ ಸಮಯದಲ್ಲಿ ಸುಮಾರು 1 ಕೋಟಿ ರೂ. ವಿದೇಶಿ ಕರೆನ್ಸಿ, 6 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು, 10 ಕೆ.ಜಿ ಬೆಳ್ಳಿಯ ವಸ್ತುಗಳು ಸೇರಿದಂತೆ 12 ಕೋಟಿ ರೂಪಾಯಿ ನಗದು ಹಾಗೂ 4 ವಾಹನಗಳನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆ 2002ರ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ ಮತ್ತು ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೂ ದಾಳಿ ನಡೆಸಲಾಗಿತ್ತು. ಶಾಸಕ ವಿರೇಂದ್ರ ಅವರ ಮನೆಯಲ್ಲಿ ಕಂತೆ ಕಂತೆ ಹಣ ಮತ್ತು ಚಿನ್ನ, ಬೆಳ್ಳಿ ಸಿಕ್ಕ ಹಿನ್ನೆಲೆ ಇಡಿ ಅಧಿಕಾರಿಗಳು ಸಿಕ್ಕಿಂನ ಗ್ಯಾಂಗ್ಟಕ್ನಲ್ಲಿ ಅವರನ್ನು ಶನಿವಾರ ಬಂಧಿಸಿದ್ದರು.
ಕ್ಯಾಸಿನೋವನ್ನು ಗುತ್ತಿಗೆಗೆ ನೀಡುವ ಕುರಿತ ಮಾತುಕತೆಗಾಗಿ ಗ್ಯಾಂಗ್‌ಟಕ್‌ಗೆ ತೆರಳಿದ್ದ ವೇಳೆ ಅವರನ್ನು ಬಂಧಿಸಲಾಗಿದ್ದು, ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ, ಟ್ರಾನ್ಸಿಟ್ ರಿಮಾಂಡ್ ಪಡೆಯಲಾಗಿದೆ ಎಂದು ಇ.ಡಿ ಅಧಿಕಾರಿಗಳು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದರು.
ವೀರೇಂದ್ರ ಪಪ್ಪಿ ಮಾಲೀಕತ್ವಕ್ಕೆ ಒಳಪಟ್ಟ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದ ವೇಳೆ, ಅವರ ಚಿತ್ರದುರ್ಗದ ಮನೆಯಲ್ಲಿ ಪತ್ತೆಯಾದ 12 ಕೋಟಿ ನಗದು, 6 ಕೋಟಿಯಷ್ಟು ಚಿನ್ನ, 10 ಕೆಜಿ ಬೆಳ್ಳಿ, ಕೋಟಿ ವಿದೇಶಿ ಕರೆನ್ಸಿ, 17 ಬ್ಯಾಂಕ್ ಖಾತೆ ಮತ್ತು 2 ಬ್ಯಾಂಕ್ ಲಾಕರ್‌ಗಳನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಗೇಮ್ ಬೆಟ್ಟಿಂಗ್ ಆರೋಪದ ಮೇಲೆ ಇಡಿ ಅಧಿಕಾರಿಗಳು ವಿರೇಂದ್ರ ಅವರನ್ನು ಬಂಧಿಸಿ, ವಿಚಾರಣೆ ಆರಂಭಿಸಿದ್ದಾರೆ.

