ಒಳಮೀಸಲಾತಿ ವಿವಾದ ಬಗ್ಗೆ ಸದನದಲ್ಲಿ ಚರ್ಚೆ: ಶಾಸಕ ರಘುಮೂರ್ತಿ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಮಾದಿಗ ಸಮುದಾಯದ ಒಳಮೀಸಲಾತಿ ವಿವಾದ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮಾದಿಗ ಸಮುದಾಯಕ್ಕೆ ನ್ಯಾಯದೊರಕಿಸಿಕೊಡುವ ಭರವಸೆಯನ್ನು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಸಮುದಾಯದ ಮುಖಂಡರಿಗೆ ನೀಡಿದರು.

ಶಾಸಕ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಮಾದಿಗ ಮಹಾಸಭಾ ಹಾಗೂ ಒಳಮೀಸಲಾತಿ ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಒಂದುದಿನದ ಧರಣಿಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಸಮುದಾಯದ ಪದಾಧಿಕಾರಿಗಳು, ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದರು.

ಮಾದಿಗ ಸಮುದಾಯದ ಒಳಮೀಸಲಾತಿಯ ಬಗ್ಗೆ ಈಗಾಗಲೇ ಮಾನ್ಯಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಚರ್ಚೆ ನಡೆಸಿದ್ದಾರೆ. ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ನೀಡುವ ಬಗ್ಗೆ ಸರ್ಕಾರವೂ ಸಹ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಹಂತದಲ್ಲೂ ಸಮುದಾಯಕ್ಕೆ ಅನ್ಯಾಯವಾಗದಂತೆ ಜಾಗ್ರತೆ ವಹಿಸಲಾಗುವುದು, ಮಾದಿಗ ಸಮುದಾಯದೊಂದಿಗೆ ನಾನಿದ್ದೇನೆಂದು ಅವರು ತಿಳಿಸಿದರು.

ಜಿಲ್ಲಾ ಮಾದಿಗ ಮಹಾಸಭಾ ಅಧ್ಯಕ್ಷ ದ್ಯಾವರನಹಳ್ಳಿತಿಪ್ಪೇಸ್ವಾಮಿ, ದಲಿತ ಸಂಘಟನೆಗಳ ಪ್ರಮುಖ ಹೋರಾಟಗಾರರಾದ ಟಿ.ವಿಜಯಕುಮಾರ್, ಕೃಷ್ಣಮೂರ್ತಿ, ಬೋರಣ್ಣ, ಬಿ.ಪಿ.ಪ್ರಕಾಶ್‌ಮೂರ್ತಿ, ಶಿವಣ್ಣ, ಆನಂದಕುಮಾರ್, ಹೊನ್ನೂರುಸ್ವಾಮಿ, ಭೀಮನಕೆರೆಶಿವಮೂರ್ತಿ,

ಎಚ್.ಪ್ರಕಾಶ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ರಾಘವೇಂದ್ರ, ರಮೇಶ್‌ಗೌಡ, ಕೆ.ವೀರಭದ್ರಪ್ಪ, ಸುಮಾ, ನಾಮಿನಿ ಸದಸ್ಯ ಬಡಗಿಪಾಪಣ್ಣ, ಆರ್.ವೀರಭದ್ರಪ್ಪ, ಅನ್ವರ್‌ಮಾಸ್ಟರ್ ಮುಂತಾದವರು ಇದ್ದರು. 

 

- Advertisement -  - Advertisement -  - Advertisement - 
Share This Article
error: Content is protected !!
";