ಕಾಲೇಜು ಪ್ರವೇಶದ್ವಾರ ಇತರೆ ಕಾಮಗಾರಿ ಗುಣಮಟ್ಟಕ್ಕೆ ಆದ್ಯತೆ ನೀಡಿ-ಶಾಸಕ ರಘುಮೂರ್ತಿ

News Desk
- Advertisement -  - Advertisement - 

ಕಾಲೇಜು ಪ್ರವೇಶದ್ವಾರ ಇತರೆ ಕಾಮಗಾರಿ ಗುಣಮಟ್ಟಕ್ಕೆ ಆದ್ಯತೆ ನೀಡಿ-ಶಾಸಕ ರಘುಮೂರ್ತಿ
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಎಚ್‌ಪಿಪಿಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಮುಕ್ತ ವಿಶ್ವವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ ನಿರ್ಮಿಸಿವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದು ಅಂದಾಜು ೧.೯೭ ಕೋಟಿ ವೆಚ್ಚದ ಕಾಮಗಾರಿಗಳನ್ನು ನಡೆಯುತ್ತಿದೆ.

ಶುಕ್ರವಾರ ಕಾಮಗಾರಿ ವೀಕ್ಷಣೆ ನಡೆಸಿ ಅಧಿಕಾರಿಗಳಿಗೆ ಗುಣಾತ್ಮಕ ಕಾಮಗಾರಿ ಜೊತೆಗೆ ನಿರ್ಧಿಷ್ಟ ಅವಧಿಯೊಳಗೆ ಕಾಮಗಾರಿ ಪೂರೈಸುವಂತೆ ಶಾಸಕ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಸೂಚನೆ ನೀಡಿದರು. 

- Advertisement - 

ನಗರದ ಸರ್ಕಾರಿ ಎಚ್‌ಪಿಪಿಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅಭಿವೃದ್ದಿ ವೀಕ್ಷಿಸಿ ಮಾತನಾಡಿ, ಕಾಲೇಜಿನ ಮುಂಭಾಗದಲ್ಲಿ ಪ್ರವೇಶ ದ್ವಾರ, ಕಾಂಪೌಂಡ್, ವಿಶಾಲವಾದ ರಸ್ತೆ, ಬಾಕ್ಸ್ ಚರಂಡಿ ನಿರ್ಮಾಣ ಮುಂತಾದ ಕಾಮಗಾರಿಗಳನ್ನು ನಿರ್ಮಿತಿ ಕೇಂದ್ರ ಕೈಗೊಂಡಿದ್ದು ನಿರ್ಮಿತಿ ಕೇಂದ್ರದ ಇಂಜಿನಿಯರ್ ಸಿದ್ದೇಶ್‌ ಗೌಡ ಶಾಸಕರಿಗೆ ಮಾಹಿತಿ ನೀಡಿದರು.

ಈಗಾಗಲೇ ನಿರ್ಧರಿಸಿದ ಯೋಜನೆಯಂತೆ ಶಾಸಕರ ಮಾರ್ಗದರ್ಶನದಲ್ಲಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆ. ಕಾಮಗಾರಿಯ ಗುಣಮಟ್ಟದ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು.

- Advertisement - 

ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ನಗರಸಭೆ ಸದಸ್ಯರಾದ ಬಿ.ಟಿ.ರಮೇಶ್‌ ಗೌಡ, ಎಂ.ಜೆ.ರಾಘವೇಂದ್ರ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ, ಮುಖಂಡರಾದ ಭಾನು ವೀರೇಶ್, ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

 

Share This Article
error: Content is protected !!
";