ಪೊಲೀಸ್ ಇಲಾಖೆಗೆ ವಾಹನ ಹಸ್ತಾಂತರಿಸಿದ ಶಾಸಕ ರಘುಮೂರ್ತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ಬುಧವಾರ ಬುಲೆರೋ ನಿಯೋ ಹೊಸ ಮಾದರಿಯ ವಾಹನವನ್ನು ಪೊಲೀಸ್ ಇಲಾಖೆಗೆ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಹಸ್ತಾಂತರಿಸಿದರು.     

- Advertisement - 

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಯವರು 2024-25ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅಂದಾಜು ರೂ.11.7 ಲಕ್ಷ ವೆಚ್ಚದಲ್ಲಿ ಒಂದು ಬುಲೆರೋ ನಿಯೋ ವಾಹನವನ್ನು ಪೊಲೀಸ್ ಇಲಾಖೆಗೆ ನೀಡಿದ್ದಾರೆ.      

- Advertisement - 

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ಚಳ್ಳಕೆರೆ ಪೊಲೀಸ್ ಉಪಾಧೀಕ್ಷಕ ರಾಜಣ್ಣ, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಶಶಿಕುಮಾರ್, ತಿಮ್ಮಣ್ಣ, ಮುತ್ತುರಾಜ್, ಉಮೇಶ್ ಸೇರಿದಂತೆ ಮತ್ತಿತರರು ಇದ್ದರು.

 

- Advertisement - 

Share This Article
error: Content is protected !!
";