ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಿ-ಬಸವರಾಜ ನಾಯಕ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರಲ್ಲಿ ಒಬ್ಬರಿಗೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಜಿಲ್ಲೆಯ ವಾಲ್ಮೀಕಿ ನಾಯಕ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಸಂಚಾಲಕ ಟಿ.ಬಸವರಾಜ ನಾಯಕ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂಬರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಜಿಲ್ಲೆಯ ವಾಲ್ಮೀಕಿ ಸಮಾಜದ ಶಾಸಕರಿಗೆ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.

- Advertisement - 

ರಾಜ್ಯದಲ್ಲಿ ನಡೆದ ರಾಜಕೀಯ ಅನಿರೀಕ್ಷಿತ ಬೆಳವಣಿಗೆಗಳಿಂದ ಸಚಿವರುಗಳಾಗಿದ್ದ ಬಳ್ಳಾರಿಯ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಮತ್ತು ಮಧುಗಿರಿ ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣ ಅವರುಗಳು ತಮ್ಮ ಸಚಿವರ ಸ್ಥಾನಗಳಿಗೆ ನೀಡಿರುವ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಗಳನ್ನು ವಾಲ್ಮೀಕಿ ನಾಯಕ ಸಮುದಾಯಕ್ಕೆ ನೀಡಬೇಕೆಂದು ಬಸವರಾಜ ನಾಯಕ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದರು.

೨೦೧೧ರ ಜನಗಣತಿಯ ಪ್ರಕಾರ-ರಾಯಚೂರಿನಲ್ಲಿ ಶೇ.೨೦, ಬಳ್ಳಾರಿಯಲ್ಲಿ ಶೇ.೧೮.೫. ಹೊರತುಪಡಿಸಿದರೆ ಮಧ್ಯ ಕರ್ನಾಟಕಕ್ಕೆ ಸೇರಿದ ಚಿತ್ರದುರ್ಗ ಜಿಲ್ಲೆಯಲ್ಲಿ ಶೇ.೧೮ ರಷ್ಟು ಜನಸಂಖ್ಯೆ ಹೊಂದಿ ಮೂರನೇ ದೊಡ್ಡ ಸ್ಥಾನದಲ್ಲಿದೆ. ಚಿತ್ರದುರ್ಗ ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರಗಳಲ್ಲಿ ೫ ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲುವು ಸಾಧಿಸಲು ವಾಲ್ಮೀಕಿ ನಾಯಕ ಸಮುದಾಯ ನೀಡಿದ ಬೆಂಬಲವೇ ಕಾರಣವಾಗಿರುತ್ತದೆ ಎನ್ನುವುದನ್ನು ಕಾಂಗ್ರೆಸ್ ನಾಯಕರು ಮರೆಯಬಾರದು ಎಂದು ಅವರು ಎಚ್ಚರಿಸಿದರು.

- Advertisement - 

ಸುದ್ದಿಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ಮೊಳಕಾಲ್ಮೂರಿನ ಎಸ್.ಇ.ದೇವಯ್ಯ, ಡಾ.ಎನ್.ಪ್ರೇಮಸುಧಾ, ಬಚ್ಚಬೋರನಹಟ್ಟಿ ಪಿ.ಓಬಯ್ಯ, ಹೊಳಲ್ಕೆರೆಯ ಕೆ.ಹನುಮಂತಪ್ಪ, ಹಿರಿಯೂರಿನ ಎಸ್.ಲೋಕೇಶ್, ಎಂ.ಆರ್.ರಾಘವೇಂದ್ರ, ಎಚ್.ಇ.ಸಿದ್ದಮ್ಮ, ಮತ್ತಿತರರು ಉಪಸ್ಥಿತರಿದ್ದರು.

 

Share This Article
error: Content is protected !!
";