ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕಳೆದ ಹಲವಾರು ದಶಕಗಳಿಂದ ಧಾರ್ಮಿಕ ಕ್ಷೇತ್ರದಲ್ಲಿ ತಮ್ಮದೇಯಾದ ವಿಶೇಷ ಛಾಪು ಮೂಡಿಸಿದ ವೇಮನರವರ ಆದರ್ಶಗಳ ಪರಿಪಾಲನೆಗೆ ನಾವೆಲ್ಲರೂ ಮುಂದಾಗೋಣವೆಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಅವರು, ಭಾನುವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಆಯೋಜಿಸಿದ್ದ ವೇಮನ ಜಯಂತಿ ಕಾರ್ಯಕ್ರಮವನ್ನು ವೇಮನ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ವೇಮನ ಮಹರ್ಷಿಗಳು ಒಂದೇ ಜಾತಿಗೆ ಸೀಮತವಾಗದೆ ಸಮಸ್ತ ಮಾನವ ಕುಲದ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ನಡೆಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ಧಾರ್ರೇಹಾನ್ಪಾಷ, ವೇಮನವರು ಧಾರ್ಮಿಕ ಕ್ಷೇತ್ರಗಳೂ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ತಮ್ಮ ಛಾಪುಮೂಡಿಸುವಲ್ಲಿ ಯಶಸ್ವಿಯಾಗಿದ್ದರು. ಸರ್ಕಾರ ಇವರ ಕೊಡುಗೆಯನ್ನು ಪ್ರತಿವರ್ಷವೂ ಎಲ್ಲರೂ ನೆನಪಿಸಿಕೊಳ್ಳುವಂತೆ ಮಾಡಲು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ. ಕಾರ್ಯಕ್ರಮಕ್ಕೆ ತಾಲ್ಲೂಕು ರೆಡ್ಡಿ ಸಮುದಾಯವೂ ಸಹ ಉತ್ತಮ ಸಹಕಾರ ನೀಡುತ್ತಾ ಬಂದಿದೆ ಎಂದರು.
ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಮಭರಮಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯರಾದ ರಮೇಶ್ಗೌಡ, ಕೆ.ವೀರಭದ್ರಪ್ಪ, ನಾಮನಿರ್ದೇಶನ ಸದಸ್ಯ ಬಡಗಿಪಾಪಣ್ಣ,
ಜಾಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಜನ್, ಸಮುದಾಯದ ಮುಖಂಡರಾದ ದಿನೇಶ್ರೆಡ್ಡಿ, ವೆಂಕಟೇಶ್ರೆಡ್ಡಿ, ಶಶಿಧರ, ನರಸಿಂಹಪ್ಪ, ಚಲುಮೇಶ್, ರಂಗಪ್ಪ, ಸುರೇಶ್, ವೀರಣ್ಣ ಮುಂತಾದವರು ಉಪಸ್ಥಿತರಿದ್ದರು.