ನೂತನ ಗ್ರಾಪಂ ಅಧ್ಯಕ್ಷೆ ವನಜಾಕ್ಷಿಗೆ ಶಾಸಕರಿಂದ ಸನ್ಮಾನ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕಾಯಾದ ಕೆ.ವನಜಾಕ್ಷಿ ಹನುಮೇಶ್ ರವರನ್ನು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಬಸವಂತಪ್ಪನವರು ಸನ್ಮಾನಿಸಿ ಗೌರವಿಸಿದರು.

ಅಭಿವೃದ್ಧಿ ಕಾರ್ಯಗಳನ್ನು ಮಾಡುವಾಗ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಉತ್ತಮ ರೀತಿಯ ಕೆಲಸ ಕಾರ್ಯಗಳನ್ನು ಮಾಡುವಂತೆ ನೂತನ ಅಧ್ಯಕ್ಷರಿಗೆ ಶಾಸಕರು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರುಗಳು, ಊರಿನ ಮುಖಂಡರು ಮತ್ತಿತರರು ಹಾಜರಿದ್ದರು.

- Advertisement -  - Advertisement - 
Share This Article
error: Content is protected !!
";