ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-2025
ನೇ ಸಾಲಿನಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ರೂ.5 ಲಕ್ಷ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. .31 ಅರ್ಜಿ ಸಲ್ಲಿಸಲು ಕೊನೆಯ ದಿನ.

ತರಬೇತಿ ಹಾಗೂ ಸಹಾಯಧನಕ್ಕಾಗಿ ಚಿತ್ರದುರ್ಗ ಜಿಲ್ಲೆಯ ಪರಿಶಿಷ್ಟ ಜಾತಿಯ06 ಮತ್ತು ಪರಿಶಿಷ್ಟ ಪಂಗಡದ05 ಅಭ್ಯರ್ಥಿಗಳು ಸೇರಿ ಒಟ್ಟು 11 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ  ಸಾಲಿನಲ್ಲಿ ನಿಗದಿಪಡಿಸಲಾಗಿದೆ. ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಿದೆ.

- Advertisement - 

ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೇರ್ಣರಾಗಿದ್ದು, 20 ರಿಂದ  45 ವಯೋಮಿತಿಯೊಳಗಿರಬೇಕು. ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚಿತ್ರದುರ್ಗ ಕಛೇರಿಯಿಂದ 10 ನೇ ತರಗತಿ ಉತ್ತೀರ್ಣರಾದ ಪ್ರಮಾಣ ಪತ್ರ ಹಾಗೂ ಖಾಯಂ ಲಘು ವಾಹನ ಚಾಲನಾ ಪರವಾನಗಿ (ಡಿ.ಎಲ್) ನಕಲು ಪ್ರತಿ ಸಲ್ಲಿಸಿ, ಅರ್ಜಿ ಪಡೆಯಬಹುದಾಗಿದೆ. ಈಗಾಗಲೇ .23 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.

  ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಇದೇ .31 ಸಂಜೆ 4.30 ಒಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಕಾಮನಭಾವಿ ಬಡವಾಣೆ, ಚಿತ್ರದುರ್ಗ ಇವರಿಗೆ ದ್ವಿಪ್ರತಿಯಲ್ಲಿ ಭರ್ತಿ ಮಾಡಿ, ನಿಯಮಗಳಿಗೆ ಅನುಗುಣವಾಗಿ ದಾಖಲೆಗಳನ್ನು ಕ್ರೂಢೀಕರಿಸಿ ಕ್ರಮವಾಗಿ ಲಗತ್ತಿಸಿ  ಖುದ್ದಾಗಿ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-234466 ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

- Advertisement - 

 

 

Share This Article
error: Content is protected !!
";