ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶುಆಸ್ಪತ್ರೆ ಆವರಣದಲ್ಲಿ ಮೇ 5 ಮತ್ತು 6 ರಂದು ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ. 25 ಜನರಿಗೆ ತರಬೇತಿ ನಿಗದಿ ಪಡಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 3 ಪಾಸ್ ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು.
ರೈತರು ವಾಟ್ಸ್ಪ್ ಮೂಲಕವೂ ನೊಂದಣಿ ಮಾಡಿಕೊಳ್ಳಬಹುದು. ನೊಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ 9482943111 ಮತ್ತು 9886002248 ಗೆ ಸಂಪರ್ಕಿಸುವAತೆ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.