ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ರೈತರಿಗೆ ಮತ್ತೂಂದು ಶುಭ ಸುದ್ದಿ ನೀಡಿದ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಭತ್ತ, ರಾಗಿ ಸೇರಿ ಮುಂಗಾರು ಋತುವಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಲು ಅನುಮೋದನೆ ನೀಡಿದ್ದಾರೆ ಎಂದು ಜೆಡಿಎಸ್ ಹರ್ಷ ವ್ಯಕ್ತಪಡಿಸಿದೆ.
ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಒದಗಿಸಲು ಬದ್ಧತೆ ತೋರಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗು ಕೇಂದ್ರ ಕೃಷಿ ಸಚಿವ ಶಿವರಾಜ್ ಚೌಹಾಣ್ ಅವರಿಗೆ ಕರ್ನಾಟಕದ ಸಮಸ್ತ ರೈತರ ಪರವಾಗಿ ಜೆಡಿಎಸ್ ಧನ್ಯವಾದಗಳನ್ನು ತಿಳಿಸಿದೆ.