ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಉದ್ಯೋಗ ಸೃಷ್ಟಿಗೆ ಮೋದಿ ಸರ್ಕಾರದ ದಿಟ್ಟ ಹೆಜ್ಜೆ” ಇಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ದೇಶಾದ್ಯಂತ ಎರಡು ವರ್ಷಗಳಲ್ಲಿ 3.5 ಕೋಟಿಗೂ ಹೆಚ್ಚು ಹೊಸ ಉದ್ಯೋಗ ಸೃಷ್ಟಿಗಾಗಿ ಸುಮಾರು ಒಂದು ಲಕ್ಷ ಕೋಟಿ ವೆಚ್ಚದ ಬೃಹತ್ ಉದ್ಯೋಗ ಪ್ರೋತ್ಸಾಹಕ ಯೋಜನೆ (ಇಎಲ್ಐ) ಕೇಂದ್ರ ಸರ್ಕಾರದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿದೆ ಎಂದು ವಿಜಯೇಂದ್ರ ತಿಳಿಸಿದರು.
ಈ ಯೋಜನೆಯಲ್ಲಿ ಮೊದಲ ಬಾರಿಯ ಉದ್ಯೋಗಿಗಳು ಒಂದು ತಿಂಗಳ ವೇತನವಾಗಿ ₹15,000 ರೂ ಗಳ ವರೆಗೆ ಪಡೆಯಲಿದ್ದಾರೆ. ಇದೇ ವೇಳೆ ಪ್ರತಿ ಹೆಚ್ಚುವರಿ ಉದ್ಯೋಗಿಗಾಗಿ ಉದ್ಯೋಗದಾತರು ಎರಡು ವರ್ಷಗಳ ಕಾಲ ಪ್ರತಿ ತಿಂಗಳು ₹3,000 ರೂ.ಗಳವರೆಗೆ ಪಡೆಯಲಿದ್ದಾರೆ. ದೇಶದ ಉತ್ಪಾದನಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪ್ರಥಮ ಬಾರಿಗೆ ಉದ್ಯೋಗಿಗಳಿಗೆ ಪ್ರೋತ್ಸಾಹ ಧನ ನೀಡುವ ವಿನೂತನ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಈ ಮಹತ್ವದ ಉದ್ಯೋಗ ಸೃಷ್ಟಿ ಪ್ರೋತ್ಸಾಹಕ ಯೋಜನೆಯು ಉದ್ಯೋಗ ಸೃಷ್ಟಿ ವ್ಯವಸ್ಥೆ ವಿಸ್ತರಿಸುವ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗ ಅರ್ಹತೆ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸುವ ಮೂಲಕ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳಿಸುವ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.