ಹೊತ್ತಿ ಉರಿದ ವಿಮಾನ, ಹೃದಯ ವಿದ್ರಾವಕ ಎಂದ ಮೋದಿ

News Desk

ಚಂದ್ರವಳ್ಳಿ ನ್ಯೂಸ್, ಅಹಮದಾಬಾದ್‌:
ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದ್ದು
, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

- Advertisement - 

230 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ಹೊತ್ತಿ ಉರಿದಿದೆ.

- Advertisement - 

ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ದುರಂತಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತ ನಮ್ಮನ್ನು ದಿಗ್ಭ್ರಮೆಗೊಳಿಸಿದೆ. ಇದು ಪದಗಳಿಗೆ ಮೀರಿದ ಹೃದಯ ವಿದ್ರಾವಕ ಘಟನೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವ ಬಗ್ಗೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಎಕ್ಸ್ ನಲ್ಲಿ ಮೋದಿ ಅವರು ಪೋಸ್ಟ್ ಮಾಡಿದ್ದಾರೆ.

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.

- Advertisement - 

 

Share This Article
error: Content is protected !!
";