ಚಂದ್ರವಳ್ಳಿ ನ್ಯೂಸ್, ಭೂತಾನ್:
ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದ ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಜ್ಞೆ ಮಾಡಿದ್ದಾರೆ.
ಭೂತಾನ್ನಲ್ಲಿ ಮಂಗಳವಾರ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ಸೋಮವಾರ ಸಂಜೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ಎಲ್ಲರನ್ನೂ ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ. ತನ್ನವರನ್ನು ಕಳೆದುಕೊಂಡ ಕುಟುಂಬದವರ ನೋವು ನನಗೆ ಅರ್ಥವಾಗುತ್ತದೆ. ಇಡೀ ರಾಷ್ಟ್ರ ಇಂದು ಅವರೊಂದಿಗೆ ನಿಂತಿದೆ ಎಂದು ಮೋದಿ ಅವರು ಹೇಳಿದರು.
ನಮ್ಮ ಸಂಸ್ಥೆಗಳು ಸ್ಫೋಟದ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಈ ಪಿತೂರಿ ಹಿಂದೆ ಯಾರಿದ್ದರೋ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮೋದಿ ಗುಡುಗಿದ್ದಾರೆ.
ದೆಹಲಿ ಸ್ಫೋಟದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

