ಇಂಟಕ್ ಯುವ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್  ನೇಮಕವಾಗಿದ್ದಾರೆ
, ನೂತನ ಜಿಲ್ಲಾಧ್ಯಕ್ಷರಿಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶುಭಕೋರಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅನುಮೋದನೆಯ ಮೇರೆಗೆ ಮಹಮ್ಮದ್ ನಿಸಾರ್ ನೇಮಕಗೊಂಡಿದ್ದಾರೆ. ನೂತನ ಜಿಲ್ಲಾಧ್ಯಕ್ಷರಿಗೆ ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕರ್ನಾಟಕದ ಅಧ್ಯಕ್ಷರಾದ ಡಿ.ಲಕ್ಷ್ಮೀ ವೆಂಕಟೇಶ್  ಆದೇಶ ಪತ್ರವನ್ನ ನೀಡುವ ಮೂಲಕ ಪಕ್ಷ ಸಂಘಟನೆ ಮಾಡುವಂತೆ ಸೂಚನೆ ನೀಡಿದ್ದಾರೆ.

- Advertisement - 

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ  ಇಂಟಕ್ ಯೂತ್ ವಿಭಾಗದ  ನೂತನ ಅಧ್ಯಕ್ಷ ಮೊಹಮ್ಮದ್ ನಿಸಾರ್, ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತನಾದ ನನ್ನನ್ನು ಗುರುತಿಸಿ ಪಕ್ಷ ಸಂಘಟನೆ ಜವಾಬ್ದಾರಿಯನ್ನು ನೀಡಿದೆ. ಪಕ್ಷದ ಮುಖಂಡರು ನನ್ನ ಪಕ್ಷ ನಿಷ್ಠೆಯನ್ನ ನಂಬಿ ಜಿಲ್ಲಾಧ್ಯಕ್ಷ ಸ್ಥಾನ ನೀಡಿದ್ದಾರೆ, ಅವರ ನಂಬಿಕೆಯನ್ನು ಉಳಿಸಿಕೊಂಡು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುವುದಾಗಿ ಹೇಳಿದರು.

ನೂತನ ಜಿಲ್ಲಾಧ್ಯಕ್ಷರಿಗೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ಡಿಪಿಎ ಅಧ್ಯಕ್ಷ ಚುಂಚೇಗೌಡ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿಶ್ವನಾಥ್ ರೆಡ್ಡಿ, ಡಿಪಿಎ ಸದಸ್ಯ ಅಂಜನಮೂರ್ತಿ ಅಭಿನಂದಿಸಿದ್ದಾರೆ.

- Advertisement - 

Share This Article
error: Content is protected !!
";