ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ದುರ್ಗದ ವಿದ್ಯಾರ್ಥಿ ಮೋಹನ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನಗರದ ಖಾಸಗಿ ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿ ಎನ್.ಮೋಹನ್ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

- Advertisement - 

ನ.೪ ರಿಂದ ೧೩ ರವರೆಗೆ ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿ ಎನ್.ಮೋಹನ್‌ಗೆ ಶಾಲೆಯಲ್ಲಿ ಗೌರವಿಸಿ ಜಯಶಾಲಿಯಾಗಲೆಂದು ಹಾರೈಸಲಾಯಿತು.

- Advertisement - 

ಜ್ಞಾನವಿಕಾಸ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷೆ ಗೀತಮ್ಮ ಎಸ್. ಕಾರ್ಯದರ್ಶಿ ಮನೋಜ್ ಎಂ. ಆಡಳಿತ ಮಂಡಳಿ ಸದಸ್ಯರು ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕ ವೃಂದ, ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement - 
Share This Article
error: Content is protected !!
";