ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರ ಸ್ಲೀಪರ್ ಸೆಲ್ಗಳ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಭಾರತ-ಪಾಕ್ ಮಧ್ಯೆ ಉದ್ವಿಗ್ನ ವಾತಾವರಣ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಉತ್ತರ ಭಾರತದ ರಾಜ್ಯಗಳಿಗೆ ಕೊಟ್ಟಿರುವ ಸೂಚನೆಗಳನ್ನೇ ನಮಗೂ ಕೊಟ್ಟಿದೆ.
ಎಲ್ಲ ಜಿಲ್ಲೆಗಳ ಎಸ್‌ಪಿಗಳಿಗೆ ಸೂಚನೆ ಕೊಡಲಾಗಿದೆ. ಮಾಹಿತಿ ಸಂಗ್ರಹಿಸಲು ತಿಳಿಸಲಾಗಿದೆ. ಸ್ಲೀಪರ್ ಸೆಲ್ಗಳ ಮೇಲೂ ನಿಗಾ ಇಡಲು ತಿಳಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸ್ಥಳೀಯ ಪೊಲೀಸರಿಗೂ ಎಚ್ಚರಿಕೆ ವಹಿಸುವಂತೆ ಸೂಚನೆ ಕೊಡಲಾಗಿದೆ. ಜಲಾಶಯಗಳು, ಅಣೆಕಟ್ಟುಗಳು, ಪ್ರಮುಖ ಸ್ಥಳಿಗಳಿಗೆ ಭದ್ರತೆ ಕೊಟ್ಟಿದ್ದೇವೆ ಎಂದು ಡಾ.ಪರಮೇಶ್ವರ್ ಹೇಳಿದರು.