ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಗಮಕ ಕಲಾಭಿಮಾನಿಗಳ ಸಂಘವು ನಡೆಸುತ್ತಿರುವ ಮಾಸಿಕ ಗಮಕ ವಾಚನ ವ್ಯಾಖ್ಯಾನ ಸಂಭ್ರಮದ 18ನೇ ಕಾರ್ಯಕ್ರಮವು ಇದೇ ತಿಂಗಳ 26/1/2025ರ ಭಾನುವಾರ ಸಂಜೆ 6 ಗಂಟೆಗೆ ಸರಿಯಾಗಿ ನಗರದ ಜೆ ಸಿ ಆರ್ ಬಡಾವಣೆಯ ಶ್ರೀ ಗಣಪತಿ ದೇವಾಲಯದ ಆವರಣದಲ್ಲಿ ನಡೆಯಲಿದೆ .
ಈ ಸಂದರ್ಭದಲ್ಲಿ ಕುಮಾರವ್ಯಾಸ ಭಾರತದ ಉದ್ಯೋಗ ಪರ್ವದ “ಕರ್ಣಭೇದನ ಅಥವಾ ಕೌರವೇಂದ್ರನ ಕೊಂದೆ ನೀನು” ಕಥಾ ಪ್ರಸಂಗವನ್ನು ಚಿತ್ರದುರ್ಗದ ವಿದುಷಿ ಮೀನಾಕ್ಷಿ ಭಟ್ ವಾಚನ ಮಾಡಲಿದ್ದು,ಡಾ. ರಾಜೀವಲೋಚನ ಅವರು ವ್ಯಾಖ್ಯಾನ ನೀಡಲಿದ್ದಾರೆ.
ಈ ಕಥಾಭಾಗವು 10ನೇ ತರಗತಿಯ ಪಠ್ಯಾಧಾರಿತವಾಗಿದ್ದು ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ ಆರ್ಯವೈಶ್ಯ ಸಂಘದ ಮಾಜಿ ಅಧ್ಯಕ್ಷ ಎಸ್.ಎನ್. ಕಾಶಿವಿಶ್ವನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲೆ, ಕಲಾವಿದರನ್ನು ಪ್ರೋತ್ಸಾಹಿಸಿ ಯಶಸ್ವಿಗೊಳಿಸಬೇಕೆಂದು ಸಂಘಟಕರು ಕೋರಿದ್ದಾರೆ.