ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ.25,000 ಗಳಂತೆ ಶಿಷ್ಯವೇತನ ನೀಡಲಾಗುವುದೆಂದು ಘೋಷಿಸಲಾಗಿದ್ದು,
ಸದರಿ ಯೋಜನೆಯಡಿ ಶಿಷ್ಯವೇತನ ಪಡೆಯಲು ಇಚ್ಛಿಸುವವರು ತಮ್ಮ ಜಿಲ್ಲಾ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು / ಉಪ ನಿರ್ದೇಶಕರು, / ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ / ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಅರ್ಜಿಯ ನಮೂನೆಯನ್ನು ಪಡೆದು,
ಡಿಸೆಂಬರ್ 14 ರೊಳಗಾಗಿ ಆಯಾ ಜಿಲ್ಲಾಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು / ಉಪ ನಿರ್ದೇಶಕರು / ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ / ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಸಲ್ಲಿಸಸುವುದು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರವರ ಕಛೇರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಂ.34, 1ನೇ ಮಹಡಿ, ಲೋಟಸ್ ಟವರ್ಸ್ ರೇಸ್‍ಕೋರ್ಸ್ ರಸ್ತೆ, ಬೆಂಗಳೂರು ದೂರವಾಣಿ ಸಂಖ್ಯೆ: 080-22261787 / 789 ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.