ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರದ ಜಾಮಿಯಾ ಮಸೀದಿ ಮುಂಭಾಗದಲ್ಲಿ ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಕಲ್ಯಾಣ ಜಿಲ್ಲಾ ಅಧಿಕಾರಿ ರೇಖಾ ಅವರು ಹಾಗೂ ಅವರ ಸಿಬ್ಬಂದಿ ವರ್ಗದವರು ಮಕ್ಕಳಿಗೆ ಮೊರಾರ್ಜಿ ಶಾಲೆ ಹಾಗೂ ಮೌಲಾನಾ ಆಜಾದ್ ಶಾಲೆಗೆ ಮಕ್ಕಳಿಗೆ ಸೇರಿಸಿ ಎಂಬ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ವಾಕ್ಪ್ ಅಧಿಕಾರಿ ಅಮ್ಜದ್ ಮೊಯಿನ್, ಜಾಮಿಯಾ ಮಸೀದಿ ಗುರು ಸಿಕ್ಬತ್ಉಲ್ಲಾ ಸೇರಿದಂತೆ ಅನೇಕ ಮುಸ್ಲಿಂ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.