ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್–ಬಿ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ ಭಾನುವಾರ ನಡೆದ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯಲ್ಲಿ ಶಾಂತಿಯುತವಾಗಿ ಯಾವುದೇ ಗೊಂದಲವಿಲ್ಲದೆ ಜರುಗಿತು.
ಚಿತ್ರದುರ್ಗ ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಪತ್ರಿಕೆ–1 ಸಾಮಾನ್ಯ ಪತ್ರಿಕೆಗೆ ಜಿಲ್ಲೆಯಲ್ಲಿ ಒಟ್ಟು 7783 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.
ಈ ಪೈಕಿ 3160 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4623 ಅಭ್ಯರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.