ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಮಾನಸಿಕ ಖಿನ್ನತೆಯಿಂದ ಮನೆಯಲ್ಲಿ ತಾಯಿ- ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ಚಿಕ್ಕಂದವಾಡಿ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಪುಷ್ಪ(52) , ಪುತ್ರಿ ಲಾವಣ್ಯ(16) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳು. ಪುಷ್ಪ ಪತಿ ಬಸವರಾಜಪ್ಪ ಕಳೆದ 3 ತಿಂಗಳ ಹಿಂದೆ ಹೃದಯಾಘಾತದಿಂದ ಸಾವು ಕಂಡಿದ್ದರು. ಪತಿಯ ಸಾವಿನಿಂದ ಪತ್ನಿ ಮತ್ತು ಮಗಳು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.
ಕಳೆದ ಒಂದು ವಾರದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು ಮೃತ ದೇಹಗಳು ಕೊಳೆತು ವಾಸನೆ ಬಂದ ಬಳಿಕ ಅಕ್ಕಪ್ಕದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಚಿಕ್ಕಜಾಜೂರು ಪೊಲೀಸರ ಭೇಟಿ, ಪರಿಶೀಲನೆ ಮಾಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.