ಚಂದ್ರವಳ್ಳಿ ನ್ಯೂಸ್, ಗುಬ್ಬಿ:
ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಅದಲಗೆರೆ ನಿವಾಸಿ ಮಹದೇವಯ್ಯ ಎಂಬುವರ ಪತ್ನಿ ವಿಜಯಲಕ್ಷ್ಮೀ (45), 18 ವರ್ಷದ ಮಗಳು ಹಾಗೂ 14 ವರ್ಷದ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡವರು.
ತಮ್ಮ ಇಬ್ಬರು ಮಕ್ಕಳು ಅಂಗವೈಕಲ್ಯದಿಂದ ಬಳಲುತ್ತಿದ್ದ ಸ್ಥಿತಿ ಕಂಡು ಮಾನಸಿಕವಾಗಿ ತಾಯಿ ವಿಜಯಲಕ್ಷ್ಮಿ ರೋಸಿಹೋಗಿದ್ದರು. ಅಲ್ಲದೆ, ಇತ್ತೀಚೆಗೆ ತಾಯಿಯ ಆರೋಗ್ಯದಲ್ಲೂ ಏರುಪೇರಾಗುತ್ತಿತ್ತು. ಗಂಡ ಮನೆಯಲ್ಲಿ ಇಲ್ಲದ ಸಮಯ ನೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಚೇಳೂರು ಪಿಎಸ್ಐ, ಪೊಲೀಸರು, ಸಿಪಿಐ ರಾಘವೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.