ಮುಂಬರುವ ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಬೇಕು:
ಸಂಸದ ಗೋವಿಂದ ಕಾರಜೋಳ
ಚಂದ್ರವಳ್ಳಿ ನ್ಯೂಸ್,
ಹಿರಿಯೂರು:
ಭಾರತೀಯ ಜನತಾ ಪಾರ್ಟಿ ಹಿರಿಯೂರು ಮಂಡಲದ ವತಿಯಿಂದ ಆಯೋಜಿಸಲಾಗಿದ್ದ ಪಕ್ಷ ಸಂಘಟನೆ, ಮನ್ ಕಿ ಬಾತ್ ಕಾರ್ಯಕ್ರಮ ಹಾಗೂ ವಿಬಿ–ಜಿ ರಾಮ್ ಯೋಜನೆ ಕುರಿತು ನಡೆದ ಸಭೆಯಲ್ಲಿ ಮಾನ್ಯ ಚಿತ್ರದುರ್ಗ ಲೋಕಸಭಾ ಸದಸ್ಯರಾದ ಗೋವಿಂದ ಎಂ. ಕಾರಜೋಳ ಅವರು ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅವರು, ಮುಂಬರುವ ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಜಯ ಸಾಧಿಸಲು ಪ್ರತಿಯೊಬ್ಬ ಕಾರ್ಯಕರ್ತರೂ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು ಎಂದು ಕರೆ ನೀಡಿದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ವಿಬಿ–ಜಿ ರಾಮ್ ಯೋಜನೆಯ ಉದ್ದೇಶ ಹಾಗೂ ಗ್ರಾಮೀಣಾಭಿವೃದ್ಧಿಗೆ ಅದರ ಮಹತ್ವದ ಕೊಡುಗೆ ಕುರಿತು ವಿವರವಾಗಿ ತಿಳಿಸಿದರು.
ಹಿರಿಯೂರು ಮಂಡಲವು ಕಳೆದ ತಿಂಗಳು ಮನ್ ಕಿ ಬಾತ್ ಕಾರ್ಯಕ್ರಮವನ್ನು 97% ವೀಕ್ಷಣೆ ಸಾಧಿಸಿರುವುದು ಶ್ಲಾಘನೀಯವಾಗಿದ್ದು, ಈ ತಿಂಗಳು 100% ವೀಕ್ಷಣೆ ಸಾಧಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ಎ ಮುರಳಿ ಅವರು ಮಾತನಾಡಿ ಮನ್ ಕಿ ಬಾತ್ ಕಾರ್ಯಕ್ರಮದ ಮಹತ್ವವನ್ನು ವಿವರಿಸಿ ಮಾತನಾಡಿ, ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕುರಿತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಜೊತೆಗೆ ವಿಬಿ–ಜಿ ರಾಮ್ ಯೋಜನೆಯು ಗ್ರಾಮೀಣ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಜೀವನಮಟ್ಟ ಸುಧಾರಣೆಗೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷರಾದ ಅಭಿನಂದನ್ ಕೆ. ಅವರು ಒಂದು ವರ್ಷ ಮಂಡಲ ಅಧ್ಯಕ್ಷರಾಗಿ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಸಂಸದರು, ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಭಿನಂದನ್ ಕೆ., ಮನ್ ಕಿ ಬಾತ್ ಕಾರ್ಯಕ್ರಮವನ್ನು ಎಲ್ಲಾ ಬೂತ್ಗಳಲ್ಲಿ ಕಡ್ಡಾಯವಾಗಿ ವೀಕ್ಷಣೆ ಮಾಡುವಂತೆ ಹಾಗೂ ಪಕ್ಷ ಸಂಘಟನೆಗೆ ಹೆಚ್ಚಿನ ಸಮಯ ಮತ್ತು ಶ್ರಮ ನೀಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ತಮ್ಮ ಒಂದು ವರ್ಷದ ಅವಧಿಯನ್ನು ಎಲ್ಲರ ಸಹಕಾರ ಮತ್ತು ಆಶೀರ್ವಾದದಿಂದ ಯಶಸ್ವಿಯಾಗಿ ಪೂರೈಸಲು ಸಾಧ್ಯವಾಗಿದೆ ಎಂದು ತಿಳಿಸಿ, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಹಕಾರ ನೀಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಮುರಳಿ, ಬಿಜೆಪಿ ಹಿರಿಯ ಮುಖಂಡರಾದ ಎನ್.ಆರ್. ಲಕ್ಷ್ಮಿಕಾಂತ್, ಮಾಜಿ ಮಂಡಲ ಅಧ್ಯಕ್ಷರಾದ ವಿಶ್ವನಾಥ್, ಮಂಡಲ ಪ್ರಧಾನ ಕಾರ್ಯದರ್ಶಿ ನಿತಿನ್ ಗೌಡ ಎಂ., ಮುಖಂಡರಾದ ಡ್ಯಾಮೇಗೌಡ, ಸಿಂಧು ತನಯ ಅಸ್ಗಾರ್,
ಶ್ರೀಮತಿ ರಾಜೇಶ್ವರಿ, ಸೋಮಣ್ಣ, ಕೇಶವಮೂರ್ತಿ, ನಾಗರಾಜ್, ಕೆ.ಟಿ. ಹನುಮಂತ, ಮುರುಳಿಧರ, ಮಂಜುನಾಥ್, ಪ್ರಜ್ವಲ್, ಕೃಷ್ಣಮೂರ್ತಿ,ಉಮೇಶ್, ರಾಜಣ್ಣ, ವೇದಮೂರ್ತಿ, ಸಿದ್ದಮ್ಮ, ದ್ರಾಕ್ಷಿಹಿನಿ, ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಿದರು.

