ಸಂಸದ, ಶಾಸಕರನ್ನ ಅರೆಸ್ಟ್ ಮಾಡಿದ ಪೊಲೀಸರು

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ ಆರ್ ಅವರನ್ನು ಪೊಲೀಸ್ ವಶಕ್ಕೆ ಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಜಾಪ್ರಭುತ್ವದ ಕರಾಳ ಅಣಕ, ವಾಕ್ ಸ್ವಾತಂತ್ರ್ಯದ ದಮನ ಮಾತ್ರವಲ್ಲ, ಸರ್ವಾಧಿಕಾರಿ ಧೋರಣೆಯ ಪರಮಾವಧಿ! ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಾಪ್ರಹಾರ ಮಾಡಿದರು.

ಇದನ್ನು ನಾನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಮೆಟ್ರೋ ದರ ಏರಿಕೆಯ ಮೂಲಕ ಜನಸಾಮಾನ್ಯರನ್ನು ಲೂಟಿ ಮಾಡಲು ಹುನ್ನಾರ ನಡೆಸಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆ ವಿರೋಧಿಸಿ ಜನರ ಧ್ವನಿಯಾಗಿ ಪ್ರತಿಭಟಿಸುವುದು ಈ ಹಿಟ್ಲರ್ ಸರ್ಕಾರದಲ್ಲಿ ಅಪರಾಧವಾಗಿದೆ. 

- Advertisement - 

ಜನಪರ ಧ್ವನಿಯನ್ನು ಹತ್ತಿಕ್ಕಲು, ಕರ್ನಾಟಕ ಬಿಜೆಪಿ ನಾಯಕರನ್ನು ಬಂಧಿಸಿರುವುದು ಅಕ್ಷಮ್ಯ. ಆ ಮೂಲಕ ಸತ್ಯವನ್ನು ಹತ್ತಿಕ್ಕಬಹುದು ಎಂದುಕೊಂಡಿದ್ದರೆ ಅದು ಸರ್ಕಾರದ ಭ್ರಮೆ. ಕೇಂದ್ರ ಸರ್ಕಾರದ ಮಧ್ಯಪ್ರವೇಶದಿಂದ ಮೆಟ್ರೋ ದರ ಏರಿಕೆ ಸದ್ಯಕ್ಕೆ ತಡೆಹಿಡಿಯಲ್ಪಟ್ಟಿದ್ದರೂ, ಈ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆ ನಿಲ್ಲುತ್ತಿಲ್ಲ.

ನಿಮ್ಮ ಹಿಟ್ಲರ್ ಶಾಹಿಯಿಂದ ನಿಮ್ಮ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ಅಧಿಕಾರದ ಮದದಲ್ಲಿ ಜನಾಕ್ರೋಶವನ್ನು ಹತ್ತಿಕ್ಕಲು ಪ್ರಯತ್ನಿಸಿದರೆ, ಪ್ರಜಾತಂತ್ರದ ಹಕ್ಕುಗಳನ್ನು ಎತ್ತಿಹಿಡಿಯಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ, ಸಾರ್ವಜನಿಕರೂ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ ಎಂದು ವಿಜಯೇಂದ್ರ ಎಚ್ಚರಿಸಿದರು.

- Advertisement - 

Share This Article
error: Content is protected !!
";