ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಗೆ ತರಳಬಾಳು ಶ್ರೀ ಹೆಸರು ಶಿಫಾರಸು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
 ಮಂಡ್ಯದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ. ಸರ್ವಾಧ್ಯಕ್ಷತೆಗೆ ಸಿರಿಗೆರೆಯ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸೇರಿ ಮೂವರ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕ ಶಿಫಾರಸು ಮಾಡಿದೆ.

- Advertisement - 

ಕುರಿತು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯಿಂದ ಮೂವರ ಹೆಸರುಗಳನ್ನು ರಾಜ್ಯ ಸಮಿತಿಗೆ ಕಳುಹಿಸಲಾಗಿದೆ. ಸಾಹಿತಿ ಮತ್ತು ಇತಿಹಾಸಕಾರ ಪ್ರೊ.ಬಿ.ರಾಜಶೇಖರಪ್ಪ ಹಾಗೂ ಲೇಖಕ ಬಿ.ಎಲ್. ವೇಣು ಅವರ ಹೆಸರುಗಳೂ ಪಟ್ಟಿಯಲ್ಲಿವೆ ಎಂದು ಹೇಳಿದ್ದಾರೆ.

- Advertisement - 

ಮಧ್ಯ ಕರ್ನಾಟಕದಲ್ಲಿ ನೂರಾರು ಕೆರೆಗಳಿಗೆ ತುಂಗಭದ್ರಾ ನದಿ ನೀರು ಹರಿಸಲು ಸ್ವಾಮೀಜಿ ಅವಿರತ ಶ್ರಮಿಸಿದ್ದಾರೆ. ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲೂ ಅನನ್ಯ ಸೇವೆ ಸಲ್ಲಿಸುತ್ತಿದ್ದಾರೆ. ಆದ್ದರಿಂದ ತರಳಬಾಳು ಶ್ರೀಗಳವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.

 

- Advertisement - 

Share This Article
error: Content is protected !!
";