ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

khushihost

ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.

ಇಂದು ಅರ್ಜಿ ವಿಚಾರಣೆ ನಡೆಯಿತು. ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿಯವರು “ಲೋಕಾಯುಕ್ತರಿಗೆ ದೂರು ನೀಡಿದ ಬಳಿಕ ನಿರ್ದಿಷ್ಟ ಕಾಲದವರಗೆ ದೂರುದಾರರು ಕಾಯ್ದಿಲ್ಲ. ತಕ್ಷಣ ಅವರು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್‌ 17ಎ ಅಡಿ ರಾಜ್ಯಪಾಲರಿಂದ ಪೂರ್ವಾನುಮತಿ ಕೋರಿದ್ದಾರೆ” ಎಂದು ಹೇಳಿದರು.

ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ವಾದ ಮಂಡಿಸಿದ ವಕೀಲೆ ಲಕ್ಷ್ಮಿ ಐಯ್ಯಂಗಾರ್ ಅವರು, ಅರ್ಜಿದಾರರ ಸೂಚನೆಯಂತೆ ಇಡೀ ಪ್ರಕ್ರಿಯೆ ನಡೆದಿದೆ ಎಂದು ಸಿಎಂ ಅಧಿಕಾರವಧಿಯ ಇಸವಿಗಳನ್ನು ಉಲ್ಲೇಖಿಸಿ ವಿವರಿಸಿದರು.

ಏನೇ ಇದ್ದರೂ ಸೆಪ್ಟೆಂಬರ್ 12ರಂದೇ ವಾದ ಮಂಡಿಸಿ ಕೊನೆಗೊಳಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ. ಅಂದೇ ನ್ಯಾಯಮೂರ್ತಿ ತೀರ್ಪು ನೀಡುವ ಸಾಧ್ಯತೆಯಿದೆ. ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ವಿಚಾರಣೆ ನಡೆಯಲಿದೆ.

ವರದಿಗಳ ಪ್ರಕಾರ, ಪ್ರತಿವಾದಿಗಳ ವಾದ ಪೂರ್ಣಗೊಂಡಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ ಮತ್ತು ಪ್ರೊ. ರವಿವರ್ಮ ಕುಮಾರ್‌ ಅವರು ಸೆಪ್ಟೆಂಬರ್‌ 12ರಂದು ವಾದಿಸಲಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";