ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರ ವ್ಯಾಪ್ತಿಯಲ್ಲಿ ಪ್ರತಿ ಶನಿವಾರ ಸ್ವಚ್ಛತಾ ಇ ಸೇವಾ ಕಾರ್ಯಕ್ರಮದಡಿ “ನಮ್ಮ ಚಿತ್ತ ಸ್ವಚ್ಛತೆಯತ್ತ “*ಎಂಬುವಂತೆ ಒಂದೊಂದು ವಾರ್ಡ್ ಸ್ವಚ್ಛತಾ ಆಂದೋಲನ ಹಮ್ಮಿಕೊಂಡಿದ್ದು ಅದರಂತೆ ವಾರ್ಡ್ ನಂ 29ರ ನಂಜಯ್ಯನ ಕೊಟ್ಟಿಗೆಯ ರುದ್ರಭೂಮಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಗೌರವಾನ್ವಿತ ಸದಸ್ಯರುಗಳು ಹಾಗೂ ಪೌರಾಯುಕ್ತರು ಮತ್ತು ಹಿರಿಯ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರುಗಳು ಮತ್ತು ದಪ್ಪೇದಾರಗಳು
ಹಾಗೂ ಪೌರಕಾರ್ಮಿಕರು ಮತ್ತು 28ನೇ ವಾರ್ಡ್‌ನ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು.

