ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ದಿವಸ್ ಕಾರ್ಯಕ್ರಮಕ್ಕೆ ನಗರಸಭೆ ಪೌರಾಯುಕ್ತೆ ರೇಣುಕಾ ಭಾಗಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸ್ವಚ್ಛ ಭಾರತ್ ಮಿಷನ್ ಯೋಚನೆ ಪ್ರಾರಂಭಿಸಿ 10 ವರ್ಷಗಳು ಕಳೆದಿದ್ದು
, ಅದರ ಸವಿ ನೆನಪಿಗಾಗಿ 10ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ  “ಸ್ವಚ್ಛ ಭಾರತ್ ದಿವಸ್ 2024ಆಚರಣೆಯನ್ನು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗಾಂಧೀಜಿ ಜಯಂತಿಯ ದಿನದಂದು  ಕಾರ್ಯಕ್ರಮ ಆಯೋಜಿಸಿದ್ದರು.

ಸದರಿ ಕಾರ್ಯಕ್ರಮಕ್ಕೆ ನಗರ ಸ್ಥಳೀಯ ಸಂಸ್ಥೆಗಳಿಂದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ಜೊತೆ ಸ್ವಚ್ಛತಾ ಈ ಸೇವಾ ಕಾರ್ಯಕ್ರಮವನ್ನು ಉತ್ತಮವಾಗಿ ನಿರ್ವಹಿಸಿದ ಮೂರು ಸ್ಥಳೀಯ ಸಂಸ್ಥೆಗಳನ್ನು,

ಉತ್ತಮವಾಗಿ ಕಾರ್ಯನಿರ್ವಹಿಸಿದ ಮೂರು ಜನ ಪೌರಾಯುಕ್ತರನ್ನು ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಕಳುಹಿಸಲಾಗಿತ್ತು. ಇದರಲ್ಲಿ ಚಿತ್ರದುರ್ಗ ನಗರಸಭೆಯ ಪೌರಾಯುಕ್ತರಾದ ರೇಣುಕಾ.ಎಂ ಇವರು ಸಹ ಇದ್ದಾರೆ.

 

 

 

- Advertisement -  - Advertisement - 
Share This Article
error: Content is protected !!
";