ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರುಗಳನ್ನು ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಆದೇಶದ ನಗರಸಭೆ ಸದಸ್ಯರಾದ ಎಂ. ಡಿ .ಸಣ್ಣಪ್ಪ, ಎಲ್. ಜಿ. ರತ್ನಮ್ಮ ಹಾಗೂ ವಿಠಲ್ ಇವರುಗಳನ್ನು ಅವಿರೋಧವಾಗಿ ನಗರಸಭಾ ಸಾಯಿ ಸಮಿತಿ ಅಧ್ಯಕ್ಷರುಗಳನ್ನಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರ ಸಭೆಯ ಎಲ್ಲಾ ಸದಸ್ಯರುಗಳು ಹಾಜರಿದ್ದು ಸಚಿವರು ಸೂಚಿಸಿದ ವ್ಯಕ್ತಿಗಳನ್ನ ಆಯ್ಕೆ ಮಾಡುವ ಮೂಲಕ ಸಾಮಾಜಿಕ ನ್ಯಾಯವನ್ನು ಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆಯ ಬಹುತೇಕ ಸದಸ್ಯರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಸಚಿವ ಸುಧಾಕರ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ನಗರಸಭೆಯ ಪೌರಾಯುಕ್ತ ಎ.ವಾಸೀಂ ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಚುನಾವಣೆ ನಂತರ ನಗರಸಭೆಯ ಕಚೇರಿಯಲ್ಲಿ ಸದಸ್ಯರುಗಳು ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾದವರಿಗೆ ಪುಷ್ಪಮಾಲೆ ಅರ್ಪಿಸಿ ಗೌರವಿಸಿದರು.