ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು.

- Advertisement - 

ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು.

ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ.

- Advertisement - 

ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

 

 

 

Share This Article
error: Content is protected !!
";