ಶುಂಠಿ ಹೊಲದ ಶೆಡ್ ನಲ್ಲಿ ನಾಡ ಬಂದೂಕು ತಯಾರಿಕೆ

khushihost

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಜಮೀನೊಂದರಲ್ಲಿ ನಾಡ ಬಂದೂಕು (ಕೋವಿ) ತಯಾರಿಸುತ್ತಿದ್ದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜೇನಿ ಹೋಬಳಿ ಕಾಳಿಕಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ.

ಖಚಿತ ವರ್ತಮಾನದ ಮೇರೆಗೆ ಹೊಸನಗರ ಪೊಲೀಸ್ ಠಾಣೇ ಸಬ್ ಇನ್ಸ್’ಪೆಕ್ಟರ್ ಶಂಕರಗೌಡ ಪಾಟೀಲ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ

ಪೊಲೀಸರ ದಾಳಿಯ ಮಾಹಿತಿ ಅರಿತ ಆರೋಪಿಗಳು , ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ, ಇನ್ಸ್’ಪೆಕ್ಟರ್ ಗುರಣ್ಣ ಹೆಬ್ಬಾಳ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಸನಗರ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

ತಯಾರಿಗೆ ಸಜ್ಜು :

ಮೂವರು ಆರೋಪಿಗಳು ಶುಂಠಿ ಹೊಲದ ಶೆಡ್ ನಲ್ಲಿ ನಾಡ ಬಂದೂಕು ತಯಾರಿಗೆ ಸಕಲ ಸಿದ್ದತೆ ಮಾಡಿಕೊಂಡಿದ್ದರು. ದಾಳಿ ವೇಳೆ ಬಂದೂಕು ತಯಾರಿಗೆ ಬಳಸುವ ನಳಿಕೆಗಳು, ಮರದ ಹಿಡಿಕೆ, ಟ್ರಿಗರ್, ಕೇಪ್, ಮದ್ದುಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -  - Advertisement - 
Share This Article
error: Content is protected !!
";