ಜೂ.27ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸಮಾರಂಭ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸಮಾರಂಭವನ್ನು ಇದೇ ಜೂನ್ 27ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ಸಿ.ವೀರೇಂದ್ರ  ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ  ಗೋವಿಂದ ಎಂ.ಕಾರಜೋಳ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ,

- Advertisement - 

ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ, ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್,

ನಗರಸಭೆ ಅಧ್ಯಕ್ಷೆ ಸುಮಿತಾ  ಬಿ.ಎನ್.ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾ ಒಕ್ಕಲಿಗರ ಸಂಘ ಅಧ್ಯಕ್ಷ ಜಿ.ಪಿ.ಚೇತನ್, ಕಾರ್ಯದರ್ಶಿ ಎಸ್.ಜಗನ್ನಾಥ್, ಗೌರವಾಧ್ಯಕ್ಷ ಪ್ರೊ.ಎನ್.ಈರಣ್ಣ ಸೇರಿದಂತೆ ಜಿಲ್ಲೆಯ ಸಮಸ್ತ ಗೌರವಾನ್ವಿತ ಜನಪ್ರತಿನಿಧಿಗಳು, ಚುನಾಯಿತ ನಗರಸಭಾ ಸದಸ್ಯರು ಹಾಗೂ ಜಿಲ್ಲೆಯ ಒಕ್ಕಲಿಗರ ಸಂಘದ ಸಮಸ್ತ ಗೌರವಾನ್ವಿತ ಮುಖಂಡರು ಹಾಗೂ ಸಮಾಜದ ಬಂಧುಗಳು ಭಾಗವಹಿಸುವರು.

- Advertisement - 

ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲ ಡಾ.ಸಿ.ಶಿವಲಿಂಗಪ್ಪ ಉಪನ್ಯಾಸ ನೀಡುವರು. ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಹೋಬಳಿ ಬೋಸೇದೇವರಹಟ್ಟಿಯ ಮಂಜಣ್ಣ ಮತ್ತು ತಂಡದವರಿಂದ  ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.

Share This Article
error: Content is protected !!
";