ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕು ಆದಿವಾಲ ಗ್ರಾಮದ ತಿರುಮಲ ನಗರ ನಿವಾಸಿ ನಾಗರಾಜ ತಂದೆ ಲೇ ತಿಮ್ಮಯ್ಯ (70) ಕಾಣೆಯಾದ ಕುರಿತು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿ ನಾಗರಾಜ 5.6 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿರುತ್ತಾರೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೊರಡುವಾಗ ನೀಲಿ ಲುಂಗಿ ಪಂಚೆ, ಬಿಳಿ ಷರ್ಟ್ ಧರಿಸಿರುತ್ತಾರೆ.
ಕಾಣೆಯಾದವರ ಗುರುತು ಪತ್ತೆಯಾದಲ್ಲಿ, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ದೂರವಾಣಿ ಸಂಖ್ಯೆ:08193-263555, 8277985509, ಪೊಲೀಸ್ ವೃತ್ತ ನಿರೀಕ್ಷಕರ ಮೊಬೈಲ್ ಸಂಖ್ಯೆ 9480803115, ಪೊಲೀಸ್ ಉಪಾಧೀಕ್ಷಕರು ಹಿರಿಯೂರು ಉಪವಿಭಾಗ :08193-263499, ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ: 08194-222782 ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.