ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಹರಿದಾಸ ಸಾಹಿತ್ಯದಲ್ಲಿ ಹೆಳವನಕಟ್ಟೆ ಗಿರಿಯಮ್ಮ: ಭಕ್ತಿ ಮತ್ತು ಪ್ರಾದೇಶಿಕತೆ ಕುರಿತು ಸಂಶೋಧನಾ ಮಹಾಪ್ರಬಂಧ ಮಂಡಿಸಿದ ಎಸ್.ನಾಗರಾಜ ಅವರಿಗೆ ದಾವಣಗೆರೆ ವಿಶ್ವವಿದ್ಯಾನಿಲಯವು ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.
ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಭೀಮಾಶಂಕರ ಜೋಶಿ ಅವರ ಮಾರ್ಗದರ್ಶನದಲ್ಲಿ ನಾಗರಾಜ ಅವರು ಸಂಶೋಧನೆ ನಡೆಸಿದ್ದರು. ನಾಗರಾಜ ಅವರು ಚನ್ನಗಿರಿ ತಾಲ್ಲೂಕಿನ ಈರಗನಹಳ್ಳಿ ಗ್ರಾಮದವರು.

