ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ- ಗೀತಾ ಭರಮಸಾಗರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
 ದೇಶದ ಅಭಿವೃದ್ದಿಯಲ್ಲಿ  ಶೈಕ್ಷಣಿಕ ಕ್ಷೇತ್ರದ ಅತ್ಯಂತ ಪ್ರಮುಖ ಪಾತ್ರವಹಿಸಿದ್ದು ಶಿಕ್ಷಕರ ಕಾರ್ಯ ಮಹತ್ವದ್ದಾಗಿದೆ. ಶಿಕ್ಷಕರೆಂದರೆ ಸಮಾಜ ಕಾಯುವ ಸೈನಿಕರು ದೇಶ ಕಟ್ಟುವ ಕಾರ್ಮಿಕರು ಎಂದು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್  ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಭರಮಸಾಗರ ಹೇಳಿದರು.

ಋಷಿಸಂಸ್ಕೃತಿ ಗುರುಕುಲ ಮಹಾಸಂಸ್ಥಾನ ಚಿತ್ರದುರ್ಗ, ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್  ಚಿತ್ರದುರ್ಗ  ಜಿಲ್ಲಾ ಘಟಕದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ನಿವೃತ್ತ ಶಿಕ್ಷಕಿಯಾದ ಕೆ. ಕಾಂತಮ್ಮ ಅವರಿಗೆ ಗುರುನಮನ ಸಮಾರಂಭದಲ್ಲಿ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿ ಮಾತನಾಡಿದರು.

ಕೆ ಕಾಂತಮ್ಮ ಅವರು ವೃತ್ತಿ ಜೀವನದಲ್ಲಿ ಮಕ್ಕಳಿಗೆ ಉತ್ತಮ ಬೋಧನೆಯ ಜೊತೆಜೊತೆಗೆ ಸಂಸ್ಕಾರವಂತರಾಗಲು ಕಾರಣರಾಗಿದ್ದೀರಿ. ನಿಮ್ಮ ಸೇವಾ ಅವಧಿಯಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಹೊರಹೊಮ್ಮಿ ರಾಜ್ಯದ ಮೂಲೆ ಮೂಲೆಗಳಲ್ಲಿ ಸುಂದರ ಬದುಕನ್ನು ಕಟ್ಟಿಕೊಳ್ಳಲು ಕಾರಣರಾಗಿದ್ದಿರಾ ನಿಮ್ಮಂತ ನಿವೃತ್ತ ಶಿಕ್ಷಕರ ಮಾರ್ಗದರ್ಶನ ನಮಗೆ ಅಗತ್ಯ ಎಂದರು.

 ಋಷಿ ಸಂಸ್ಕೃತಿ ಗುರುಕುಲ ಮಹಾಸಂಸ್ಥಾನದ ಆಡಳಿತಾಧಿಕಾರಿ ಮಾಲತೇಶ್ ಅರಸ್ ಮಾತನಾಡಿ, ಪ್ರಸ್ತುತ ಶಿಕ್ಷಣ ವಾಣಿಜ್ಯವಾಗಿದ್ದು, ಗ್ರಾಮೀಣ ಭಾಗದ ಬಡವರಿಗೆ ಇನ್ನೂ ಉತ್ತಮ ಶಿಕ್ಷಣ ಅಗತ್ಯವಾಗಿದೆ, ದೇಶದಲ್ಲಿದ್ದ ಅನೇಕ ರಾಜಮನೆತನಗಳಲ್ಲಿ ಶೈಕ್ಷಣಿಕವಾಗಿ ಹೆಚ್ಚು ಅವಕಾಶ ಮತ್ತು ಪ್ರೋತ್ಸಾಹ ಕೊಟ್ಟಿದ್ದು ಮೈಸೂರು ಸಂಸ್ಥಾನ, ಅದರಲ್ಲೂ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ ಅಂತಹ ರಾಜಶ್ರೀಗಳು ಗ್ರಂಥಾಲಯ ಆರಂಭಿಸಿ  ಬಡತನದ ಅನೇಕರು ಉತ್ತಮ ಶಿಕ್ಷಣ ಕ್ರಾಂತಿ ಮಾಡಲು ಪ್ರೋತ್ಸಾಹ ನೀಡಿದ್ದಾರೆ. ಅವರ ಸ್ಮರಣೆಗಳೊಂದಿಗೆ ನಾವು ಗುರು ನಮನ ಮಾಡುತ್ತೇವೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ತಾಲ್ಲೂಕು ಕಾರ್ಯದರ್ಶಿ ಸಿ.ಎನ್. ರೂಪಾ ಮಾತನಾಡಿ, ನಿವೃತ್ತ ಶಿಕ್ಷಕರನ್ನು ಗೌರವಿಸಿ ಗುರುನಮನ ಸಲ್ಲಿಸುವ ಋಷಿಸಂಸ್ಕೃತಿ ಗುರುಕುಲ ಮಹಾಸಂಸ್ಥಾನ ಮತ್ತು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್  ನ ಕಾರ್ಯ ಶ್ಲಾಘನೀಯ, ನಿವೃತ್ತರ ಅನುಭವ ಯುವ ಶಿಕ್ಷಕರಿಗೆ ಸಿಗಲಿ ಎಂದರು
ಸಮಾರಂಭದಲ್ಲಿ ಪ್ರಗತಿ ಗ್ರಾಮೀಣ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಸಿ.ಎಂ. ಬಸವರಾಜಯ್ಯ ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ಸದಸ್ಯರಾದ ಸುಶೀಲಾ ಮತ್ತು ಅನೇಕರು  ಉಪಸ್ಥಿತರಿದ್ದರು.

 

- Advertisement -  - Advertisement - 
Share This Article
error: Content is protected !!
";