ಗ್ರಾಮೋದ್ಯೋಗ ಮಂಡಳಿಯ ಮಾಜಿ ನಿರ್ದೇಶಕ ನಾಮದೇವಪ್ಪ ಇನ್ನಿಲ್ಲ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ತಾಲ್ಲೂಕಿನ ಮದಕರಿಪುರದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ನಾಮದೇವಪ್ಪ.ಆರ್.(78) ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಅವರು ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ. ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಗುರುವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ಮೃತರ ಸ್ವಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.