ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗು ಮೂಡಿಸಿದ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌ ನಂದಿನಿ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗು ಮೂಡಿಸಿದ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌ ನಂದಿನಿ! ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ಅಪ್ಪಟ ಕನ್ನಡ ಬ್ರ್ಯಾಂಡ್‌ ನಂದಿನಿಯು $1,079 ಮಿಲಿಯನ್‌ (₹9,009.65 ಕೋಟಿ) ಮೌಲ್ಯದೊಂದಿಗೆ ಬ್ರ್ಯಾಂಡ್‌ ಫೈನಾನ್ಸ್‌ 2025ರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಏರಿದೆ. ಕಳೆದ ವರ್ಷ ನಂದಿನಿ ಭಾರತದ ಟಾಪ್‌ 100 ಅಮೂಲ್ಯ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ 43ನೇ ಸ್ಥಾನದಲ್ಲಿತ್ತು. ಬ್ರ್ಯಾಂಡ್‌ ಫೈನಾನ್ಸ್‌ ಲಂಡನ್‌ ಮೂಲದ ಅಂತರರಾಷ್ಟ್ರೀಯ ಸಲಹಾ ಸಂಸ್ಥೆಯಾಗಿದೆ. 

- Advertisement - 

ಆಹಾರ ಮತ್ತು ಪಾನೀಯ ವಿಭಾಗದಲ್ಲಿ 4ನೇ ಸ್ಥಾನ ಪಡೆದಿರುವ ನಂದಿನಿಯು ಅಮುಲ್‌, ಬ್ರಿಟಾನಿಯಾ ಮತ್ತು ಮದರ್‌ ಡೈರಿಗಳಂತಹ ದೊಡ್ಡದೊಡ್ಡ ಬ್ರ್ಯಾಂಡ್‌ಗಳ ಜೊತೆಗೆ ಸ್ಪರ್ಧಿಸುತ್ತಿದೆ. ನಂದಿನಿಯು ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಸರ್ಕಾರದ ಸಂಕಲ್ಪ, ರೈತರ ಶ್ರಮ ಮತ್ತು ಹೆಚ್ಚುತ್ತಿರುವ ಗ್ರಾಹಕರ ವಿಶ್ವಾಸಾರ್ಹತೆಯ ಪ್ರತಿಬಿಂಬವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

- Advertisement - 

 

 

 

 

Share This Article
error: Content is protected !!
";