ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಅಜಯ್ ರೈ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ರಾಜ್ಯದಲ್ಲಿ ಮಾದಕ ವಸ್ತುಗಳು (ಡ್ರಗ್ಸ್) ಲೀಲಾಜಾಲವಾಗಿ ಮಾರಾಟವಾಗುತ್ತಿದೆ. ಇದರ ವಿರುದ್ಧ ತಕ್ಷಣದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.
ಈ ಪತ್ರದಲ್ಲಿ, ಮಾದಕ ವಸ್ತುಗಳ ಮಾರಾಟದ ಏರಿಕೆಯು ಯುವಕರ ಮೇಲೆ ದೊಡ್ಡ ಪ್ರಭಾವ ಬೀರಿದೆ ಮತ್ತು ಇದು ಸಮಾಜದ ಸ್ಥಿತಿಗತಿಗಳನ್ನೂ ಹಾನಿಗೊಳಪಡಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಮಾದಕ ವಸ್ತುಗಳ ಮಾರಾಟವನ್ನು ನಿಲ್ಲಿಸುವುದು ಸರ್ಕಾರದ ಪ್ರಾಥಮಿಕ ಕರ್ತವ್ಯವಾಗಿದೆ. ಹೆಚ್ಚುತ್ತಿರುವ ಡ್ರಗ್ಸ್ ಸಂಬಂಧಿತ ಅಪರಾಧ ಮತ್ತು ಯುವಕರ ದುರಾಸಕ್ತಿ ತಡೆಗಟ್ಟುವುದು ಅತ್ಯಗತ್ಯ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.