ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ನಾರಾಯಣಸ್ವಾಮಿರವರಿಗೆ ಕರವೇ ಪ್ರವೀಣಶೆಟ್ಟಿ ಬಣದಿಂದ ಸನ್ಮಾನ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಾಶೆಟ್ಟಿಹಳ್ಳಿ ಪ್ರೌಡ ಶಾಲೆಯ ಮುಖ್ಯ ಶಿಕ್ಷಕ
  ನಾರಾಯಣಸ್ವಾಮಿರವರ ಉತ್ತಮ ಸೇವೆಯನ್ನು ಪರಿಗಣಿಸಿ ರಾಷ್ಟ್ರಪ್ರಶಸ್ತಿ ನೀಡಲಾಗಿದೆ,ಈ ಸಂಬಂದ ರಾಷ್ಟ್ರಪ್ರಶಸ್ತಿ ಮೂಲಕ ದೊಡ್ಡಬಳ್ಳಾಪುರಕ್ಕೆ ಕೀರ್ತಿ ತಂದ ನಾರಾಯಣಸ್ವಾಮಿ ರವರಿಗೆ ಕ.ರ.ವೇ ಪ್ರವೀಣ್ ಶೆಟ್ಟಿ ಬಳಗ ಕಾರ್ಯಕರ್ತರಿಂದ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ  ಬಾಗವಹಿಸಿದ್ದ ಜಿಲ್ಲಾಧ್ಯಕ್ಷ ರಮೇಶ್‌ಮಾತನಾಡಿ ಸಮಾಜಕ್ಕೆ ಉತ್ತಮ ಶಿಕ್ಷಕರ ಅಗತ್ಯವಿದ್ದು, ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾರಾಯಣಸ್ವಾಮಿ ಸೇವೆಗೆ ರಾಷ್ಟ್ರ ಪ್ರಶಸ್ತಿ ಲಭಿಸಿರುವುದು ದೊಡ್ಡಬಳ್ಳಾಪುರದ ಹೆಮ್ಮೆಯ ವಿಚಾರವಾಗಿದೆ ಎಂದು ಅಭಿಪ್ರಾಯಪಟ್ಟರು.

 ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಸ್ಥಾನಮಾನ ಸಿಗುವ ನಿಟ್ಟಿನಲ್ಲಿ ನಾರಾಯಣಸ್ವಾಮಿ ಅವರ ಕೊಡುಗೆ ದೊಡ್ಡ ಪ್ರಮಾಣದಲ್ಲಿದೆ ಎಂದರು.

ತಾಲ್ಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ಮಾತನಾಡಿ, ಶಿಕ್ಷಕ ವೃತ್ತಿಯೆನ್ನುವುದು ಸಮಾಜ ನಿರ್ಮಾಣದಲ್ಲಿ ಅತ್ಯಂತ ವಿಶೇಷ ಸ್ಥಾನ ಪಡೆದಿದೆ. ಈ ಹಂತದಲ್ಲಿ ನಾರಾಯಣಸ್ವಾಮಿ ಅವರ ಕೊಡುಗೆ ಎಲ್ಲರಿಗೂ ಮಾದರಿ. ಮೌನವಾಗಿ ಕೆಲಸ ಮಾಡಿ, ಫಲಿತಾಂಶದಿಂದಲೇ ಸದ್ದು ಮಾಡುವ ಗುಣ ನಿಜಕ್ಕೂ ಶ್ಲಾಘನೀಯ ಎಂದರು.

 ಕಾರ್ಯಕ್ರಮದಲ್ಲಿ ಕಾನೂನು ಸಲಹೆಗಾರ ಆನಂದ್,ಕಾರ್ಯದರ್ಶಿಗಳಾದ ಮಂಜುನಾಥ್, ಸಿರಾಜ್ ಪಾಷಾ, ಮುಕ್ಕೇನಳ್ಳಿ ರವಿ, ನಗರಾಧ್ಯಕ್ಷ ಶ್ರೀನಗರ ಬಶೀರ್, ನಗರ ಉಪಾಧ್ಯಕ್ಷ ಮಂಜುನಾಥ್, ಮುಖಂಡರಾದ ರಾಜಘಟ್ಟ ಮಹೇಶ್, ರವಿ, ಕೆಂಪೇಗೌಡ, ರಾಜಣ್ಣ, ಶ್ರೀನಿವಾಸ್, ಬಾಶೆಟ್ಟಿಹಳ್ಳಿ ಕೃಷ್ಣಪ್ಪ, ವಿಶ್ವಣ್ಣ, ರಾಜಣ್ಣ ಇದ್ದರು.

 

 

- Advertisement -  - Advertisement - 
Share This Article
error: Content is protected !!
";