ವಕೀಲರ ಸಂಘದಿಂದ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನಗರಸಭೆ ಸಹಯೋಗದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮ ನ್ಯಾಯಾಲಯದ ಆವರಣದಲ್ಲಿ ನಡೆಯಿತು.

 ಸ್ವಚ್ಛತಾ ಕಾರ್ಯಕ್ರಮದ ನಂತರ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆಯ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮೌನಚರಣೆಯ ಮೂಲಕ ನ್ಯಾಯಾಧೀಶರು ಹಾಗೂ ವಕೀಲ ವೃಂದದವರು ಗಾಂಧೀಜಿ ಸ್ಮರಣೆ  ಮಾಡಿದರು.

- Advertisement - 

ಈ ವೇಳೆ  ನಾಲ್ಕನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ. ನಿರ್ಮಲ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಚ್.ಎ.ಶಿಲ್ಪ, ಪ್ರಧಾನ ಸಿವಿಲ್ ಅಪರ ಹಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ಪ್ರವೀಣ್ಆರ್ .ಜೆ.ಎಸ್ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್,

ಅಪರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಪ್ರೀತಿ, ಎರಡನೇ ಅಪರ ಸಿವಿಲ್ ನ್ಯಾಯಾಧೀಶರಾದ ರವಿ ಬೆಟಗಾರ್, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ರೇಣುಕಾ ಮೂರ್ತಿ,  ಪ್ರಧಾನ ಕಾರ್ಯದರ್ಶಿ ಬಿ.ಕೆ.ಕನಕ ರಾಜ್, ಉಪಾಧ್ಯಕ್ಷ ಕೆ.ಜಗನ್ನಾಥ್, ಖಜಾಂಚಿ ಆರ್. ಗೀತಾ, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ ಹಾಗೂ ಸಂಘದ ಪದಾಧಿಕಾರಿಗಳು ವಕೀಲರು ಭಾಗವಹಿಸಿದ್ದರು.

- Advertisement - 

Share This Article
error: Content is protected !!
";