ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ 10 ವರ್ಷ ಪೂರ್ಣಗೊಳಿಸಿದ ಪ್ರಯುಕ್ತ ಫೆ.4ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಫೆ.4 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣ ಸಭಾಂಗಣದಲ್ಲಿ ಜರಗುವ ಕಾರ್ಯಕ್ರಮವನ್ನು 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರ ಉದ್ಘಾಟಿಸುವರು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು.
ಜಿ.ಪಂ.ಸಿಇಓ ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಡಿಹೆಚ್ಓ ಡಾ.ರೇಣುಪ್ರಸಾದ್, ಪಿ.ಯು. ಉಪನಿರ್ದೇಶಕ ಪುಟ್ಟಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್.ಎಂ.ಆರ್,
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತ.ಸಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವೈಶಾಲಿ.ಜೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಉಪನಿರ್ದೇಶಕಿ ಭಾರತಿ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.