ಡಿಸೆಂಬರ್ 14 ರಂದು ರಾಷ್ಟ್ರೀಯ ಲೋಕ್ ಅದಾಲತ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಂತ ರಾಷ್ಟ್ರೀಯ  ಲೋಕ್ ಅದಾಲತ್ನ್ನು ಡಿಸೆಂಬರ್ 14 ರಂದು ಹಮ್ಮಿಕೊಳ್ಳಲಾಗಿದೆ.

ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು,

ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು,

ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ರೇರಾ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು,  ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ). ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Share This Article
error: Content is protected !!
";