ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನುಜಿಲ್ಲೆಯಲ್ಲಿ ಇದೇ ಡಿ. 21 ರಿಂದ 24 ವರೆಗೆ ಹಮ್ಮಿಕೊಳ್ಳಲಾಗಿದೆ.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಒಟ್ಟು 1169 ತಂಡಗಳನ್ನು ರಚಿಸಿಕೊಂಡು ಕಳೆದ ಬಾರಿ ನಡೆಸಿದ ಲಸಿಕಾ ಕೇಂದ್ರಗಳಲ್ಲಿ ಈ ಬಾರಿಯೂ ಸಹ ಎರಡು ಹನಿಗಳ ಪೋಲಿಯೋ ಲಸಿಕೆಯನ್ನು ಹಾಕಲಾಗುವುದು. ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ 239 ಮೇಲ್ವಿಚಾರಕರನ್ನು ನೇಮಿಸಲಾಗಿದೆ.
ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೆ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಪುನಃ ಇದೇ ಡಿ.21 ರಿಂದ 24 ರವರೆಗೆ ಪೋಲಿಯೋ ಹಾಕಿಸಲು 1,26,361 ಮಕ್ಕಳನ್ನು ಗುರುತಿಸಲಾಗಿದೆ.
ಸಾರ್ವಜನಿಕರು, ಸರ್ಕಾರೇತರ ಸಂಘ-ಸಂಸ್ಥೆಗಳು, ಧಾರ್ಮಿಕ ಮುಖಂಡರು, ಚುನಾಯಿತ ಪ್ರತಿನಿಧಿಗಳು ಹಾಗೂ ಇತರೆ ಅಧಿಕಾರಿ ವರ್ಗದವರು ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮನವಿ ಮಾಡಿದ್ದಾರೆ.

