ಕಲಾಶ್ರಿ ಪ್ರಶಸ್ತಿಗೆ ಭಾಜನರಾದ ನಾಟ್ಯ ಪ್ರವೀಣ ಶಿವಪ್ರಕಾಶ್  

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕಳೆದ ೪೨ ವರ್ಷಗಳಿಂದಲೂ ಭರತನಾಟ್ಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈಯುತ್ತಿರುವ ಚಿತ್ರದುರ್ಗದ ನಾಟ್ಯ ಪ್ರವೀಣ ಖ್ಯಾತ ನೃತ್ಯ ಗುರು ವಿದ್ವಾನ್ ಸಿ.ಆರ್.ಶಿವಪ್ರಕಾಶ್ ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿಯ ಪ್ರತಿಷ್ಠಿತ ಕರ್ನಾಟಕ ಕಲಾಶ್ರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕನ್ನಡ ಭವನದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಚಿತ್ರದುರ್ಗದ ಸಿ.ಆರ್.ಶಿವಪ್ರಕಾಶ್‌ರವನ್ನು ಆಯ್ಕೆ ಮಾಡಲಾಗಿದೆ.

- Advertisement - 

ಸಂಗೀತ ಮತ್ತು ನೃತ್ಯ ಕ್ಷೇತ್ರಗಳಲ್ಲಿನ ಹಿರಿಯ ಸಾಧಕರುಗಳಿಗೆ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";