ನವೋದಯ-ಮೊರಾರ್ಜಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ..

News Desk

ಸ್ಪರ್ಧಾತ್ಮಕ ಪರೀಕ್ಷೆಗಳು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕ-ಮಂಜಪ್ಪ ಗುಳುಕೊಪ್ಪ
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಶಿವಮೊಗ್ಗ ಜಿಲ್ಲೆಯ ಹುಂಚ ಕ್ಷೇತ್ರದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಚತುರ್ಥ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆ – ಉಚಿತ ತರಬೇತಿ ಶಿಬಿರದ ಉದ್ಘಾಟನೆ ನಡೆಯಿತು.

ದ್ವಿತೀಯ ವರ್ಷದ ಶಿಬಿರದಲ್ಲಿ ಭಾಗಿಯಾದ ಎಲ್ಲಾ ಮಕ್ಕಳಿಗೆ ಅಭಿನಂದನಾ ಪತ್ರ ಮತ್ತು ಪರಿಸರ ಜಾಗೃತಿಗಾಗಿ ನೆಡಲು ಸಸಿಗಳನ್ನು ಕೊಡಲಾಯಿತು.ನಿವೃತ್ತ ಮುಖ್ಯ ಶಿಕ್ಷಕ ಮಂಜಪ್ಪ ಗುಳುಕೊಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ “ಸ್ಪರ್ಧಾತ್ಮಕ ಪರೀಕ್ಷೆಗಳು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿದ್ದು, 5ನೇ ತರಗತಿಯಲ್ಲೇ ಇದನ್ನು ಎದುರಿಸಲು ಉತ್ತಮವಾದ ವೇದಿಕೆ ಕಲ್ಪಿಸಿದ ಹಳೆ ನವೋದಯ ವಿದ್ಯಾರ್ಥಿ ಬಳಗ ಮತ್ತು ಹುಂಚ ಯುವ ತಂಡವನ್ನು ಅವರು ಶ್ಲಾಘಿಸಿದರು.

ನವೋದಯ ಮತ್ತು ಮೊರಾರ್ಜಿ ಶಿಬಿರದ ಸಂಸ್ಥಾಪಕ ಪ್ರಕಾಶ್ ಜೋಯ್ಸ್  ಕಾಗ್ನಿಝoಟ್ ಬೆಂಗಳೂರು ಮಾತನಾಡಿದ ಮಾತನಾಡಿ ನವೋದಯ ಮತ್ತು ಮೊರಾರ್ಜಿ ವಸತಿ ಶಾಲೆಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅತ್ಯುತ್ತಮ ಶಿಕ್ಷಣ ಯೋಜನೆಗಳು. ನಮ್ಮ ಶಿಬಿರದ ಮೂಲ ಉದ್ದೇಶ, ಮಕ್ಕಳ ಕಲಿಕಾ ಜ್ಞಾನ ವೃದ್ಧಿಸುವುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಜ್ಞಾನ, ಸಲಹೆ, ಸೂಚನೆಗಳನ್ನು ಈ ಕಾರ್ಯಕ್ರಮದ ಮೂಲಕ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಮನವರಿಕೆ ಮಾಡಿಕೊಡುವುದು ಎಂದು ತಿಳಿಸಿದರು.

ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ 2021 ಸ್ಥಾಪಿತವಾಗಿದ್ದು ಮಲೆನಾಡಿನ ಭಾಗದ(ಪರೀಕ್ಷೆಗೆ ದಾಖಲಿಸಿದ) ವಿದ್ಯಾರ್ಥಿಗಳಿಗೆ ಉಚಿತವಾಗಿ ನವೋದಯ ಮತ್ತು ಮೊರಾರ್ಜಿ ಶಾಲೆಯ ಪರಿಚಯ, ಆಯ್ಕೆ ಪ್ರಕ್ರಿಯೆ ಮಾಹಿತಿ, ಕೋಚಿಂಗ್, ಮಾದರಿ ಪರೀಕ್ಷೆ, ಕಲಿಕಾ ಸಾಮಗ್ರಿಗಳು, ಸಮಯ ನಿರ್ವಹಣೆ ಮತ್ತು ಇತರೆ ಉಪಯುಕ್ತ ಮಾಹಿತಿಗಳನ್ನು ಉಚಿತವಾಗಿ ಕೊಡಲಾಗುತ್ತಿದೆ ಎಂದು ಹೇಳಿದರು.

ಕಳೆದ ಮೂರು ವರ್ಷದ ಶಿಬಿರದಲ್ಲಿ 209 ಮಕ್ಕಳು, 20ಕ್ಕೂ ಹೆಚ್ಚು ವಿವಿಧ ಶಾಲೆಗಳಿಂದ ಭಾಗವಹಿಸಿದ್ದು, 6 ಮಕ್ಕಳು ನವೋದಯ ಶಾಲೆಗೆ ಮತ್ತು 42 ಮಕ್ಕಳು ಮೊರಾರ್ಜಿ ಶಾಲೆಗೆ ತೇರ್ಗಡೆ ಆಗಿರುತ್ತಾರೆ. ಒಟ್ಟಾರೆ ಶಿಬಿರದಿಂದ 48 ಮಕ್ಕಳು, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಒಟ್ಟು 1.68 ಕೋಟಿ ಮೌಲ್ಯದ   ಶೈಕ್ಷಣಿಕ ಉಪಯೋಗ ಪಡೆದುಕೊಂಡಿರುತ್ತಾರೆ.

ಶಿಬಿರದ ಮೂಲಕ ಸಾಧನೆ ಮಾಡಿದ ಮಕ್ಕಳು ಮತ್ತು ಪೋಷಕರು ತಮ್ಮ ಸಂತೋಷ ಮತ್ತು ಅನಿಸಿಕೆ ಹಂಚಿಕೊಂಡರು.ಮಕ್ಕಳ ಪ್ರೇರಣೆಗಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಟೀ ಶರ್ಟ್, ನೋಟ್‌ ಬುಕ್‌, ಪೆನ್, ಹಣ ಉಳಿತಾಯ ಹುಂಡಿ ಮತ್ತು ಅಧ್ಯಯನ ಸಾಮಗ್ರಿಗಳನ್ನು ಒಳಗೊಂಡ “ಸ್ವಾಗತ ಕಿಟ್” ಅನ್ನು ವಿತರಿಸಲಾಯಿತು.

ಪ್ರಾರಂಭದಿಂದಲೂ ಈ ತಂಡವು ಎಲ್ಲಾ ಸಂವಹನಗಳಿಗಾಗಿ ವಾಟ್ಸಪ್ಪ್ ಗುಂಪನ್ನು ರಚಿಸಿ ಪೋಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಮಾಹಿತಿ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.ಶಿಬಿರದ ಯಶಸ್ಸಿಗೆ ಕಾರಣರಾದ ಶಿಬಿರದ ಸಂಚಾಲಕ ಪ್ರಕಾಶ್ ಜೋಯ್ಸ್, ಅಭಿಷೇಕ್, ಸಂಜಯ್, ನಾಗೇಶ್ ನಾಯ್ಕ್, ವಿನಯ್, ಶ್ರೀಕಾಂತ್, ಲಕ್ಷಣ್ .. ಶಿಕ್ಷಕರಾದ ಸಂತೋಷ್, ನವೀನ್, ಪ್ರಶಾಂತ್, ಆದಿತ್ಯ, ದಿನೇಶ್, ಶಿವಕುಮಾರ್, ಪ್ರಶಾಂತ್ ವಿ, ಅಕ್ಷತಾ, ಸವಿತಾ, ಶ್ರೀಕಾಂತ್ ಉಡುಪ, ಶ್ವೇತಾ, ಹಳೆ ನವೋದಯ ವಿದ್ಯಾರ್ಥಿಗಳಿಗಳಾದ ಪುನೀತ್, ಕೆ ಎಂ ಸುನಿಲ್, ರಮ್ಯಾ ರಾವ್, ಸಿಂಧು ಇವರೆಲ್ಲರ ಸಾಮಾಜಿಕ ಕಳಕಳಿಯ ಕಾರ್ಯವನ್ನು ಶ್ಲಾಘಿಸಿ, ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಹುಂಚ ಜೈನ ಮಠದ ಕಾರ್ಯ ನಿರ್ವಾಹಕರಾದ ಪ್ರಕಾಶ್ ಮಗದಂ, ಊರಿನ ಹಿರಿಯರಾದ ಗೋಪಾಲರಾವ್ ಉಪಸ್ಥಿತರಿದ್ದರು.ಪ್ರಸಕ್ತ ಸಾಲಿನ ಶಿಬಿರಕ್ಕೆ ಹುಂಚ ಸುತ್ತಮುತ್ತಲಿನ 22ಕ್ಕೂ ಹೆಚ್ಚು ಶಾಲೆಗಳಿಂದ ಒಟ್ಟು 72 ಮಕ್ಕಳು ಶಿಬಿರಕ್ಕೆ ಹೆಸರು ನೋಂದಾಯಿಸಿದ್ದು ಶಿಬಿರ ಸೆಪ್ಟೆಂಬರ್ ತಿಂಗಳಿಂದ ಪ್ರಾರಂಭವಾಗಲಿದ್ದು, ಸತತ ನಾಲ್ಕು ತಿಂಗಳು, ಪ್ರತಿ ಭಾನುವಾರ ಮಕ್ಕಳಿಗೆ ಪ್ರವೇಶ ಪರೀಕ್ಷೆಗೆ ಉತ್ತಮ ತರಬೇತಿ ನೀಡಲಾಗುತ್ತದೆ. ಜವಾಹರ ನವೋದಯ ವಿದ್ಯಾಲಯ ಗಾಜನೂರು 2025-26ನೇ ಸಾಲಿಗೆ ೬ನೇ ತರಗತಿಗೆ ಪ್ರವೇಶ ಪಡೆಯಲು ಆನ್ ಲೈನ್ (ONLINE) ಅರ್ಜಿಗಳನ್ನು ಆಹ್ವಾನಿಸಲಾಗಿದೆ.  

- Advertisement -  - Advertisement - 
Share This Article
error: Content is protected !!
";