ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅಕ್ರಮ ಕುರಿತು ನ್ಯಾಯಮೂರ್ತಿ ಮೈಖೆಲ್ ಕುನ್ಹಾ ವಿಚಾರಣೆ ಆಯೋಗದ ಶಿಫಾರಸ್ಸುಗಳ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ ಹಾಗೂ ಅಧಿಕಾರಿಗಳ ಸಮಿತಿ ವರದಿ ಪರಾಮರ್ಶೆ ಹಾಗೂ ಶಿಫಾರಸ್ಸು ಕುರಿತು ವಿಧಾನಸೌಧದಲ್ಲಿ ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ
ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ಎಸ್.ಪ್ರಕಾಶ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕೊರೊನ ಅಕ್ರಮಗಳ ತನಿಖೆಗಾಗಿ ರಚಿಸಲಾದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ‘ಕುನ್ಹಾ ಆಯೋಗವು ಸರ್ಕಾರಕ್ಕೆ ವರದಿಯನ್ನು ನೀಡಿದೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.
ಈ ವರದಿಯನ್ನು ಸಂಪುಟ ಉಪ ಸಮಿತಿಯು ಅಂಗೀಕಾರ ಮಾಡಿದೆ. ವರದಿಯಲ್ಲಿನ ಶಿಫಾರಸ್ಸುಗಳ ಅನ್ವಯ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.