ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಎನ್‌ಡಿಎ ಸರ್ಕಾರ ಪ್ರತಿ ಕ್ವಿಂಟಾಲ್ ಕಬ್ಬಿಗೆ 355 ರೂ.ಗಳನ್ನು ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ NDA ಸಂಪುಟದ ಆರ್ಥಿಕ ವ್ಯವಹಾರಗಳ ಸಮಿತಿ ಸಭೆ ಕಬ್ಬು ಬೆಳೆಗಾರರ ಹಿತ ರಕ್ಷಣೆಗೆ ಪ್ರತಿ ಕ್ವಿಂಟಾಲ್‌ಕಬ್ಬಿನ ಎಫ್‌ಆರ್‌ಪಿ ಬೆಲೆಯನ್ನು 355 ರೂ.ಗಳಿಗೆ ನಿಗದಿಪಡಿಸಿದೆ ಎಂದು ಜೆಡಿಎಸ್ ಹರ್ಷ ವ್ಯಕ್ತಪಡಿಸಿದೆ.
ಪ್ರಸಕ್ತ ವರ್ಷದ ಅಕ್ಟೋಬರ್ ನಿಂದ ಆರಂಭವಾಗುವ (2025-26) ಋತುವಿಗೆ ಕಬ್ಬಿನ ನ್ಯಾಯಯುತ ಹಾಗೂ ಲಾಭದಾಯದ (ಎಫ್‌ಆರ್‌ಪಿ) ಬೆಲೆಯನ್ನು ಕ್ವಿಂಟಾಲ್‌ಗೆ ಶೇ.4.41ರಷ್ಟು ಹೆಚ್ಚಳ ಮಾಡಿದೆ. ಈ ನಿರ್ಧಾರದಿಂದ ಕರ್ನಾಟಕ ಸೇರಿದಂತೆ ದೇಶದ 5 ಕೋಟಿ ಕಬ್ಬು ಬೆಳೆಯುವ ರೈತರಿಗೆ ಅನುಕೂಲವಾಗಲಿದೆ ಎಂದು ಜೆಡಿಎಸ್ ತಿಳಿಸಿದೆ.