ಖರ್ಗೆ ಬೆನ್ನಿಗೆ ನಿಂತ ಡಿಕೆಶಿ, ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗುತ್ತಿಗೆದಾರ ಸಚಿನ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ಲೀನ್ ಚಿಟ್ ನೀಡಿರುವುದು ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಎಂಬಂತಾಗಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

- Advertisement - 

ಸಚಿನ್ ಅವರ ಡೆತ್ ನೋಟ್‌ನಲ್ಲಿ ಸ್ಪಷ್ಟವಾಗಿ ಪ್ರಿಯಾಂಕ್ ಖರ್ಗೆಯವರ ಆಪ್ತರ ಹೆಸರು ಉಲ್ಲೇಖಗೊಂಡಿದೆ. ಸಚಿವರ ಆಪ್ತರು ಸಚಿವರ ಪ್ರಭಾವ, ರಕ್ಷಣೆ ಇಲ್ಲದೆ ಕೋಟಿ ಕೋಟಿ ಡಿಮ್ಯಾಂಡ್ ಮಾಡಲು ಸಾಧ್ಯವೇ ಇಲ್ಲ.

- Advertisement - 

ಹೀಗಿರುವಾಗ ಸ್ವತಃ ಉಪಮುಖ್ಯಮಂತ್ರಿಗಳೇ ಆರೋಪಿತರ ಪರವಾಗಿ ನಿಂತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಟೀಕಿಸಿದೆ.
ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಮುಖ್ಯಮಂತ್ರಿ ಪಟ್ಟ ಏರಲೇಬೇಕೆಂಬ ಹಠದಲ್ಲಿರುವ ಡಿಕೆಶಿ
, ಅದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಪರವಾಗಿ ಮಾತನಾಡುತ್ತಿದ್ದಾರೆ.

ಕರ್ನಾಟಕ ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಡಿಕೆಶಿ ಉದಾಹರಣೆಯಾಗಿದ್ದಾರೆ ಎಂದು ಬಿಜೆಪಿ ಹರಿಹಾಯ್ದಿದೆ.

- Advertisement - 

 

Share This Article
error: Content is protected !!
";