ನೀಟ್ ಪರೀಕ್ಷೆ : ನಿಷೇಧಾಜ್ಞೆ ಜಾರಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೇ.4 ರಂದು ಚಿತ್ರದುರ್ಗದ ನಾಲ್ಕು ಹಾಗೂ ಚಳ್ಳಕೆರೆ ನಗರದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶದಲ್ಲಿ ಸಿ.ಆರ್.ಪಿ.ಸಿ. ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಮತ್ತು ಕಂಪ್ಯೂಟರ್ ಇಂಟರ್ನೆಟ್ ಕೇಂದ್ರಗಳನ್ನು ಮುಚ್ಚುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

 

Share This Article
error: Content is protected !!
";